ಬಳ್ಳಾರಿ, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ನಾಳೆ ಬಳ್ಳಾರಿಗೆ ಆಗಮಿಸಲಿದ್ದಾರೆ.
ನಾಳೆ ಬೆಂಗಳೂರಿನಿಂದ ರಸ್ತೆ ಮೂಲಕ ಬಳ್ಳಾರಿಗೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ `ಸುವರ್ಣ ಮಹೋತ್ಸವ’ದಲ್ಲಿ ಭಾಗವಹಿಸಿ ಮಧ್ಯಾಹ್ನ 01 ಗಂಟೆಗೆ ಬಳ್ಳಾರಿಯಿಂದ ರಸ್ತೆ ಮೂಲಕ ಪ್ರಯಾಣ ಹೊಸಪೇಟೆಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್