
ಕೋಲಾರ, 0೧ನವಂಬರ್(ಹಿ.ಸ.) :
ಆ್ಯಂಕರ್ : ಎಪ್ಪತ್ತನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಕೋಲಾರ ನಗರದ ಗಾಂಧಿ ವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ.ಎಸ್.ಸುರೇಶ್ ಅವರು ರಾಷ್ಟ್ರ ಹಾಗೂ ನಾಡ ಧ್ವಜಾರೋಹಣ ನೆರವೇರಿಸಿದರು. ನಾಡದೇವಿ ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜನರಿಗೆ ರಾಜ್ಯೋತ್ಸವ ಸಂದೇಶ ನೀಡಿದ ಸಚಿವರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೧೮ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ಅಲ್ಲದೆ ಸ್ತಬ್ಧಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿದರು. ಭುವನೇಶ್ಚರಿ ದೇವಿಯ ಮೆರವಣಿಗೆ ಕಾಡುಸಿದ್ದೇಶ್ವರ ಮಠದ ಆನೆಯ ಜೊತೆಗೆ ಮುಂದೆ ಸಾಗಿತು.
ಕಾರ್ಯಕ್ರಮದಲ್ಲಿ ಕೋಲಾರ ಸಂಸದರಾದ ಎಂ.ಮಲ್ಲೇಶ್ ಬಾಬು ಶಾಸಕರಾದ ಕೊತ್ತನೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು ಎಂ.ಎಲ್. ಅನಿಲ್ ಕುಮಾರ್,ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಉಪಾಧ್ಯಕ್ಷೆ ಸಂಗೀತ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವೈ.ಶಿವಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಹನೀಫ್,ಜಿಲ್ಲಾಧಿಕಾರಿ ಎಂ ಆರ್ ರವಿ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ ಬಾಗೇವಾಡಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ನಿಖಿಲ್,ಅಪರ ಜಿಲ್ಲಾಧಿಕಾರಿ ಮಂಗಳ,ಉಪವಿಭಾಗಾಧಿಕಾರಿ ಡಾ.ಮೈತ್ರಿ, ತಹಸಿಲ್ದಾರ್ ಡಾ.ನಯನ,ನಗರಸಭೆ ಆಯುಕ್ತರಾದ ನವೀನ್ ಚಂದ್ರ, ಜಿಲ್ಲಾ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್,ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ಕುಮಾರ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ವಿಜಯಲಕ್ಷ್ಮಿ, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷರಾದ ಕೆ.ಆರ್.ತ್ಯಾಗರಾಜ್,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಗೋಪಾಲಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ : ಕೋಲಾರ ನಗರದ ಗಾಂಧಿವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ.ಎಸ್.ಸುರೇಶ್ ಅವರು ರಾಷ್ಟ್ರ ಹಾಗೂ ನಾಡ ಧ್ವಜಾರೋಹಣ ನೆರವೇರಿಸಿದರು. ನಾಡದೇವಿ ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್