
ಬಳ್ಳಾರಿ, 10 ನವೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುತ್ತಿರುವುರಿಂದ 11 ಕೆ.ವಿ. ಫೀಡರನಲ್ಲಿ ನ.13 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಎಫ್-9 ವ್ಯಾಪ್ತಿಯ ನೆಹರು ಕಾಲೋನಿ, ಎಸ್.ಎನ್.ಪೇಟೆ 1ನೇ, 2ನೇ, 4ನೇ, 5ನೇ ಮತ್ತು 6ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಡಿಎಆರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌ0ಡ್, ಗಡಿಗಿ ಚೆನ್ನಪ್ಪ ವೃತ್ತ, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ಹಳೆಯ ತಾಲ್ಲೂಕು ಕಚೇರಿ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ, ರೈಲ್ವೇ ಸ್ಟೇಷನ್ ರೋಡ್ ಸೇರಿದಂತೆ ನಾನಾ ಕಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್