ಕೋಲಾರದಲ್ಲಿ ಕ್ರೈಸ್ತ ಸಮುದಾಯಕ್ಕೆ ಜಾಗೃತಿ ಕಾರ್ಯಕ್ರಮ
ಕೋಲಾರದಲ್ಲಿ ಕ್ರೈಸ್ತ ಸಮುದಾಯಕ್ಕೆ ಜಾಗೃತಿ ಕಾರ್ಯಕ್ರಮ
ಚಿತ್ರ ; ಕೋಲಾರದಲ್ಲಿ ಕ್ರೈಸ್ತ ಸಮುದಾಯಕ್ಕೆ ಜಾಗೃತಿ ಕಾರ್ಯಕ್ರಮ ನಡೆಯಿತು.


ಚಿತ್ರ ; ಕೋಲಾರದಲ್ಲಿ ಕ್ರೈಸ್ತ ಸಮುದಾಯಕ್ಕೆ ಜಾಗೃತಿ ಕಾರ್ಯಕ್ರಮ ನಡೆಯಿತು.


ಕೋಲಾರ, ೧೪ ನವಂಬರ್ (ಹಿ.ಸ.) :

ಆ್ಯಂಕರ್ : ತಮಕದ ಮೌಲಾನಾ ಅಜಾದ್ ಭವನದಲ್ಲಿ ಇಂದು ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆಯ ಕ್ರೈಸ್ತ ಪಾದ್ರಿಗಳು ಹಾಗೂ ಸಮುದಾಯ ಮುಖಂಡರಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಸವಿಸ್ತಾರ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಕೆಎಂಡಿಸಿ ವ್ಯವಸ್ಥಾಪಕಿ ಶ್ರೀಮತಿ ಶೆರಿನ್ ತಾಜ್ ಅವರು ನಿಗಮದ ಅಧಿಕೃತ ವೆಬ್ಸೈಟ್, ಅದರ ಬಳಕೆ ವಿಧಾನ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮದ ಬಗ್ಗೆ ವಿವರವಾದ ಪ್ರಸ್ತುತಿಯನ್ನು ನೀಡಿದರು. ಕ್ರೈಸ್ತ ಸಮುದಾಯಕ್ಕೆ ಲಭ್ಯವಿರುವ ಶಿಕ್ಷಣ ಸಹಾಯ, ಸ್ವಯಂ ಉದ್ಯೋಗ ಸಾಲ ಸೇರಿದಂತೆ ಅನೇಕ ಕಲ್ಯಾಣ ಯೋಜನೆಗಳ ನಿಬಂಧನೆಗಳು, ಅಗತ್ಯ ದಾಖಲಾತಿಗಳು ಹಾಗೂ ಅರ್ಹತಾ ಮಾನದಂಡಗಳನ್ನು ಸ್ಪಷ್ಟವಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕ್ರೈಸ್ತ ಪಾದ್ರಿಗಳು ಮತ್ತು ಸಮುದಾಯ ಮುಖಂಡರು ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಜನರಿಗೆ ತಲುಪಿಸುವುದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟರು. ತಂತ್ರಜ್ಞಾನ ಬಳಕೆ, ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಜಾಗೃತಿ ಕಾರ್ಯಕ್ರಮವನ್ನು ಕೆಎಂಡಿಸಿ ಕೋಲಾರ ಕಚೇರಿಯು ಆಯೋಜಿಸಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಚಿತ್ರ ; ಕೋಲಾರದಲ್ಲಿ ಕ್ರೈಸ್ತ ಸಮುದಾಯಕ್ಕೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande