ಪಂಡಿತ್ ನೆಹರು ಜನ್ಮ ವಾರ್ಷಿಕೋತ್ಸವ ; ಪ್ರಧಾನಿ ಮೋದಿ ಗೌರವ ನಮನ
ನವದೆಹಲಿ, 14 ನವೆಂಬರ್ (ಹಿ.ಸ.) : ಆ್ಯಂಕರ್ : ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, “ಮ
Neharu


ನವದೆಹಲಿ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, “ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

1889ರ ನವೆಂಬರ್ 14ರಂದು ಪ್ರಯಾಗ್‌ರಾಜ್‌ನಲ್ಲಿ ಜನಿಸಿದ ನೆಹರು ಅವರು ಮನೆಯಲ್ಲಿಯೇ ಖಾಸಗಿ ಬೋಧಕರಿಂದ ಪ್ರಾಥಮಿಕ ಶಿಕ್ಷಣ ಪಡೆದರು. ನಂತರ 15ನೇ ವಯಸ್ಸಿನಲ್ಲಿ ಇಂಗ್ಲೆಂಡ್‌ಗೆ ತೆರಳಿ ಎರಡು ವರ್ಷಗಳ ಕಾಲ ಹ್ಯಾರೋ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ನೈಸರ್ಗಿಕ ವಿಜ್ಞಾನದಲ್ಲಿ ಪದವಿ ಪಡೆದರು.

1912ರಲ್ಲಿ ಭಾರತಕ್ಕೆ ಮರಳಿದ ನೆಹರು ಅವರು ನೇರವಾಗಿ ರಾಷ್ಟ್ರ ರಾಜಕೀಯದಲ್ಲಿ ತೊಡಗಿಸಿಕೊಂಡು, ಭಾರತದ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಹೊರಹೊಮ್ಮಿದರು. ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರ ಭಾರತದ ಮೊದಲ ಪ್ರಧಾನಿಯಾಗಿ ಅವರು ಕಾರ್ಯ ನಿರ್ವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande