
ಬಳ್ಳಾರಿ, 14 ನವೆಂಬರ್ (ಹಿ.ಸ.) :
ಆ್ಯಂಕರ್ : ಇಂದಿನ ಮಕ್ಕಳೇ ನಾಳೆಯ ಪ್ರಜೆಗಳಾಗಿದ್ದು ಪ್ರತಿಯೊಬ್ಬರೂ ಶಿಕ್ಷಣ, ಶಿಸ್ತು ಮತ್ತು ಸಂಯಮವನ್ನು ಕಲಿಕೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಅವರು ತಿಳಿಸಿದ್ದಾರೆ.
ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್‍ನ ಶ್ರೀ ವಾಸವಿ ವಿದ್ಯಾಲಯದಲ್ಲಿ ಶುಕ್ರವಾರ ನಡೆದ ಮಕ್ಕಳ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮ ದಿನದ ಅಂಗವಾಗಿ ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜವಾಹರಲಾಲ್ ನೆಹರು ಅವರು ಶಿಕ್ಷಣಕ್ಕೆ ಆದ್ಯತೆ ನೀಡಿ ಪ್ರತಿಯೊಬ್ಬ ಮಗುವು ಕಡ್ಡಾಯವಾಗಿ ಶಿಕ್ಷಣ ಕಲಿತು ಸಮಾಜದ ಮುಖ್ಯವಾಹಿನಿಯಲ್ಲಿ ಪಾಲ್ಗೊಳ್ಳಬೇಕು ಎಂದು ಕನಸು ಕಂಡಿದ್ದರು. ಈ ಕಾರಣಕ್ಕಾಗಿಯೇ ಪ್ರತಿ ಮಗು ಅಕ್ಷರ ಕಲಿಯುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಪ್ರಾದೇಶಿಕ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ರಫೀಕ್ ಅಹ್ಮದ್ ಅವರು, ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು. ಪ್ಲಾಸ್ಟಿಕ್ ಬಳಕೆ, ಕಸ ನಿರ್ವಹಣೆ, ಇನ್ನಿತರೆಗಳ ಕುರಿತು ವಿದ್ಯಾರ್ಥಿಗಳು ಬಾಲ್ಯದಿಂದಲೇ ಗಮನ ನೀಡಬೇಕು ಎಂದು ಹೇಳಿದರು.
ಶಿಕ್ಷಕರಾದ ಕುಮಾರಿ ವಿ. ಚೈತ್ರ ಅವರು ಮಕ್ಕಳ ದಿನಾಚರಣೆ ಮತ್ತು ವಾಯು ಮಾಲಿನ್ಯ ನಿಯಂತ್ರಣದ ಮಹತ್ವದ ಕುರಿತು ಉಪನ್ಯಾಸ ನೀಡಿದರು.
ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್‍ನ ಉಪಾಧ್ಯಕ್ಷರಾದ ಎಸ್. ಜಿತೇಂದ್ರ ಪ್ರಸಾದ್ ಅವರು, ಇಂದಿನ ವಿದ್ಯಾರ್ಥಿಗಳು ಭವಿಷ್ಯದ ಆಶಾಕಿರಣ. ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಪ್ರಜೆಗಳಾಗಿ ದೇಶ ನಿರ್ಮಾಣದಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಖಜಾಂಚಿಗಳಾದ ನಾಗಳ್ಳಿ ರಮೇಶ್, ಬಿಡಿಸಿಸಿಐನ ಕಾಯಕಾರಿ ಸಮಿತಿ ಸದಸ್ಯರಾದ ತಾಟಕೂರಿ ಶ್ರೀನಿವಾಸ್‍ರಾವ್, ನೇಕಾರ ನಾಗರಾಜ್, ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್‍ನ ಅಧ್ಯಕ್ಷರಾದ ವಿಠ್ಠ ಕೃಷ್ಣಕುಮಾರ್, ಮಾಜಿ ಅಧ್ಯಕ್ಷರಾದ ಅಗಡಿ ಗವಿಸಿದ್ದೇಶ್ವರ ಪ್ರಸಾದ್, ಉಪಾಧ್ಯಕ್ಷರಾದ ಎನ್.ಎನ್. ಶ್ರೀನಿವಾಸಲು, ಕಾರ್ಯದರ್ಶಿಗಳಾದ ಪಿ.ಎನ್. ಸುರೇಶ್, ವಿಶೇಷ ಆಹ್ವಾನಿತರಾದ ಇಂಜಿನಿಯರ್ ಸಂಜೀವ್ ಪ್ರಸಾದ್, ವಿಷ್ಣು, ರಘುಪದಾರ್ಥಿ, ತಲ್ಲಂ ಕಿಶೋರ್, ಖಖಿಔ ದ್ವೀತಿಯ ದರ್ಜೆಸಹಾಯಕಿ ಶ್ರೀಮತಿ ಸರೋಜ,ಪಿ ವಿ.ವಿ. ಪ್ರಸಾದ್, ಮುಖ್ಯೋಪಾಧ್ಯಾಯರಾದ ವೀರೇಶ್.ಯು ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಐಶ್ವರ್ಯ ಮತ್ತು ಪ್ರಿಯದರ್ಶಿನಿ ಅವರು ಪ್ರಾರ್ಥನೆ ಸಲ್ಲಿಸಿದರು. ಶಿಕ್ಷಕಿ ಜಯಲಕ್ಷ್ಮಿ ಅವರು ಸ್ವಾಗತ ಕೋರಿದರು. ಶಿಕ್ಷಕಿ ಎಚ್.ಎಂ. ಸುಜಾತ ಮತ್ತು ಜೆ.ಎಸ್.ಬಸವರಾಜೇಶ್ವರಿ ಅವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಎಚ್. ಶೃತಿ ಅವರು ವಂದರ್ನಾಪಣೆ ಸಲ್ಲಿಸಿದರು.
ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಸ್ಪಧೆಗಳಲ್ಲಿ ವಿಜೇತ ವಿದ್ಯಾಥಿಗಳಿಗೆ ಬಹುಮಾನ ವಿತರಿಸಿ, ಅಭಿನಂದಿಸಲಾಯಿತು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್