
ಮಂಡ್ಯ, 15 ನವೆಂಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾರತದ ಪ್ರಗತಿಗೆ ಸಹಕಾರ ಚಳುವಳಿ ಬೆನ್ನೆಲುಬಿನಂತಾಗಿದೆ. ಕೃಷಿ, ಹೈನುಗಾರಿಕೆ, ಗ್ರಾಮೀಣ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಹಕಾರ ಸಂಸ್ಥೆಗಳ ಬಲವರ್ಧನೆಗೆ ನಮ್ಮ ಸರ್ಕಾರ ಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa