ಭಾಗ್ಯನಗರ ಪ.ಪಂ. : ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನ
ಕೊಪ್ಪಳ, 15 ನವೆಂಬರ್ (ಹಿ.ಸ.) : ಆ್ಯಂಕರ್ : ಭಾಗ್ಯನಗರ ಪಟ್ಟಣ ಪಂಚಾಯತಿಯಿ0ದ 2025-26ನೇ ಸಾಲಿನ ಡೇ-ನಲ್ಮ್ ಅಭಿಯಾನದಡಿ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ(ಪಿ.ಎಂ.ಎಸ್.ವಿ.ಎ. ನಿಧಿ) ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಯಡಿ ಬೀದಿ ಬದಿ
ಭಾಗ್ಯನಗರ ಪ.ಪಂ. : ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನ


ಕೊಪ್ಪಳ, 15 ನವೆಂಬರ್ (ಹಿ.ಸ.) :

ಆ್ಯಂಕರ್ : ಭಾಗ್ಯನಗರ ಪಟ್ಟಣ ಪಂಚಾಯತಿಯಿ0ದ 2025-26ನೇ ಸಾಲಿನ ಡೇ-ನಲ್ಮ್ ಅಭಿಯಾನದಡಿ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ(ಪಿ.ಎಂ.ಎಸ್.ವಿ.ಎ. ನಿಧಿ) ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಬೀದಿ ವ್ಯಾಪಾರಿಗಳ ಜೀವನೋಪಾಯ ಅಭಿವೃದ್ಧಿಗಾಗಿ ವ್ಯವಹಾರವನ್ನು ಪ್ರಾರಂಭಿಸಲು ಕೈಗೆಟುಕುವ ದರದಲ್ಲಿ ಕಿರು ಸಾಲ ರೂ.15,000/- ಗಳವರೆಗೆ ನೀಡುವುದರ ಜೊತೆಗೆ ನಿಯಮಿತ ಸಾಲ ಮರುಪಾವತಿಗಾಗಿ ಅವಕಾಶ ನೀಡಲಾಗುತ್ತದೆ. ಈಗಾಗಲೇ ಭಾಗ್ಯನಗರ ಪಟ್ಟಣ ಪಂಚಾಯತಿಯ ಬೀದಿ ವ್ಯಾಪಾರಿಗಳ ಸಮೀಕ್ಷೆಯಿಂದ ಕೈಬಿಟ್ಟು ಹೋಗಿರುವ ಮತ್ತು ಹೊಸದಾಗಿ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಬೀದಿ ವ್ಯಾಪಾರಿಗಳ ನೋಂದಣಿಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವಿಷಯ ನಿರ್ವಾಹಕರು, ಡೇ-ನಲ್ಮ್ ವಿಭಾಗ, ಪಟ್ಟಣ ಪಂಚಾಯತಿ ಭಾಗ್ಯನಗರ ಇವರನ್ನು ಸಂಪರ್ಕಿಸಬಹುದು ಎಂದು ಪ.ಪಂ. ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande