ಬಿರ್ಸಾ ಮುಂಡಾ ಜನ್ಮ ದಿನಾಚರಣೆ ; ರಾಷ್ಟ್ರಪತಿ ಸೇರಿದಂತೆ ಗಣ್ಯರಿಂದ ಪುಷ್ಪ ನಮನ
ನವದೆಹಲಿ, 15 ನವೆಂಬರ್ (ಹಿ.ಸ.) : ಆ್ಯಂಕರ್ : ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು ಬೆಳಿಗ್ಗೆ ನವದೆಹಲಿಯ ಸಂಸತ್ ಸಂಕೀರ್ಣದಲ್ಲಿ ಪುಷ್ಪ ನಮನ ಸಲ್ಲಿಸಿದರು.
Honour


ನವದೆಹಲಿ, 15 ನವೆಂಬರ್ (ಹಿ.ಸ.) :

ಆ್ಯಂಕರ್ : ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು ಬೆಳಿಗ್ಗೆ ನವದೆಹಲಿಯ ಸಂಸತ್ ಸಂಕೀರ್ಣದಲ್ಲಿ ಪುಷ್ಪ ನಮನ ಸಲ್ಲಿಸಿದರು.

ಭಾರತದ ಬುಡಕಟ್ಟು ಸ್ವಾತಂತ್ರ್ಯ ಹೋರಾಟದ ಪ್ರೇರಕ ಶಕ್ತಿಯಾಗಿದ್ದ ಬಿರ್ಸಾ ಮುಂಡಾ, ಬ್ರಿಟಿಷರ ವಿರುದ್ಧದ ಅಸಾಧಾರಣ ಹೋರಾಟದ ಮೂಲಕ ಜನಾಂಗೀಯ ಹಕ್ಕುಗಳಿಗಾಗಿ ಧೀರವಾಗಿ ಹೋರಾಡಿದ ಮಹಾನ್ ನಾಯಕ.

ರಾಷ್ಟ್ರಪತಿ ಮುರ್ಮು ಅವರು ಬಿರ್ಸಾ ಮುಂಡಾದವರ ಪ್ರತಿಮೆಗೆ ಪುಷ್ಪಾರ್ಚನೆಗಳನ್ನು ಸಲ್ಲಿಸಿದ ನಂತರ, ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ಪರಂಪರೆ ಮತ್ತು ಹಕ್ಕುಗಳ ಸಂರಕ್ಷಣೆಗೆ ಬಿರ್ಸಾ ಮುಂಡಾ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು,

“ಬಿರ್ಸಾ ಮುಂಡಾ ಅವರ ತ್ಯಾಗ ಮತ್ತು ಹೋರಾಟವು ದೇಶದ ಪ್ರತಿ ನಾಗರಿಕನಿಗೆ ಪ್ರೇರಣೆಯಾಗಿದೆ ಎಂದಿದ್ದಾರೆ.

ದೇಶಾದ್ಯಂತ ಬುಡಕಟ್ಟು ಗೌರವ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ಸಂಸತ್ ಆವರಣದಲ್ಲಿ ನಡೆದ ಈ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅನೇಕ ಕೇಂದ್ರ ಸಚಿವ ರಿಜೀಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande