ಮಹಿಳಾ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ, 15 ನವೆಂಬರ್ (ಹಿ.ಸ.) : ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ಯೋಜನೆಗಳು : ಉದ್ಯೋಗಿನಿ
ಮಹಿಳಾ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ, 15 ನವೆಂಬರ್ (ಹಿ.ಸ.) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ.

ಯೋಜನೆಗಳು :

ಉದ್ಯೋಗಿನಿ ಯೋಜನೆ :

ವಯೋಮಿತಿ 18 ರಿಂದ 55 ವರ್ಷಗಳೊಳಗಿರುವ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಆದಾಯ ಮಿತಿ ರೂ.02 ಲಕ್ಷ ಹೊಂದಿರಬೇಕು. ಘಟಕ ವೆಚ್ಚ ಕನಿಷ್ಠ ರೂ.01 ಲಕ್ಷದಿಂದ ಗರಿಷ್ಟ ರೂ.03 ಲಕ್ಷ, ಶೇ.50 ರಷ್ಟು ಸಹಾಯಧನ ನೀಡಲಾಗುವುದು.

ಸಾಮಾನ್ಯ ವರ್ಗದವರಿಗೆ ಆದಾಯ ಮಿತಿ ರೂ.1.50 ಲಕ್ಷ ಹೊಂದಿರಬೇಕು. ಘಟಕ ವೆಚ್ಚ ಗರಿಷ್ಟ ರೂ.03 ಲಕ್ಷ, ಶೇ.30 ರಷ್ಟು ಸಹಾಯಧನ ನೀಡಲಾಗುವುದು.

ಚೇತನ ಯೋಜನೆ :

ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ 18 ವರ್ಷ ಮೇಲ್ಪಟ್ಟು).

ಧನಶ್ರೀ ಯೋಜನೆ :

ಹೆಚ್.ಐ.ವಿ ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ 18 ವರ್ಷ ರಿಂದ 60 ವರ್ಷ).

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ :

ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ :

1993-94 ಮತ್ತು 2007-08ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.

ಸೂಚನೆ : ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಧನಶ್ರೀ ಯೋಜನೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಅರ್ಜಿದಾರರು ಅರ್ಜಿಯನ್ನು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು.

ಈ ಎರಡು ಯೋಜನೆಗಳಿಗೆ ಅರ್ಜಿಯನ್ನು ಆಫ್‌ಲೈನ್‌ನಲ್ಲಿ ಸಲ್ಲಿಸುವವರು ನಿಗದಿಪಡಿಸಿದ ಅವಧಿಯೋಳಗೆ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

ಉದ್ಯೋಗಿನಿ ಯೋಜನೆಯ ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು, ಅರ್ಜಿದಾರರು ಸಹ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು, ಅರ್ಜಿದಾರರು ಸಚಿವರು, ಶಾಸಕರು ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಮೇಲ್ಕಂಡ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್, ಬೆಂಗಳೂರು ಓನ್, ಕರ್ನಾಟಕ ಓನ್ ಕೇಂದ್ರಗಳಿಗೆ ಭೇಟಿ ನೀಡಬೇಕು. ಈ ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಗರದ ಎಸ್.ಪಿ ವೃತ್ತದ ಬಳಿಯ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande