
ಗದಗ, 15 ನವೆಂಬರ್ (ಹಿ.ಸ.) :
ಆ್ಯಂಕರ್ : ಗದಗ ರೋಣ ತಾಲೂಕಿನ ಮೆಣಸಗಿ ಗ್ರಾಮದ ಶ್ರೀ ಲಿಂಗಬಸವೇಶ್ವರ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆಯಲ್ಲಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರ ಲಾಲ ನೆಹರು ಅವರ ಜನ್ಮ ದಿನಾಚರಣೆ ಅಂಗವಾಗಿ ಮಕ್ಕಳ ದಿನಾಚರಣೆ ಹಾಗೂ ಪೋಷಕರ , ಪಾಲಕರ ಮಹಾಸಭೆ ಶುಕ್ರವಾರ ಯಶಸ್ವಿಯಾಗಿ ಜರುಗಿತು.
ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಪಂಡಿತ ಜವಾಹರಲಾಲ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಪೋಷಕರ ಪಾಲಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆಯನ್ನು ಆರಂಭಿಸಲಾಯಿತು.
ನಂತರ ಮಾತನಾಡಿದ ಅವರು ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಶಾಲೆ ಹಾಗೂ ಮನೆಯಲ್ಲಿ ಪಾತ್ರ ಪ್ರಮುಖವಾಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ, ಅಧ್ಯಯನದ ಗುಣಮಟ್ಟ, ಪರೀಕ್ಷಾ ಫಲಿತಾಂಶ, ಪೋಷಕಾಂಶಯುಕ್ತ ಆಹಾರ, ಸ್ವಚ್ಛತೆ, ಆರೋಗ್ಯ, ಬಾಲ್ಯವಿವಾಹ, ಮಕ್ಕಳ ಮೇಲಿನ ಹಿಂಸೆ, ಬಾಲಕಾರ್ಮಿಕ ಪದ್ಧತಿ, ಪೋಸ್ಕೋ ಕಾಯ್ದೆ ಕುರಿತಂತೆ ಅರಿವು ಹೊಂದುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.
ಶಾಲಾ ಅಭಿವೃದ್ಧಿಗೆ ಪಾಲಕರ ಸಕ್ರಿಯ ಸಹಕಾರ ಅತ್ಯಗತ್ಯ. ಮಕ್ಕಳು ಮಧ್ಯಾಹ್ನದ ಊಟ, ಕ್ರೀಡೆ, ಪುಸ್ತಕ ಓದು ಇತ್ಯಾದಿ ವಿಷಯಗಳಲ್ಲಿ ಸಂಪೂರ್ಣವಾಗಿ ಭಾಗವಹಿಸುವಂತೆ ಪೋಷಕರು ತಮ್ಮ ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಹಾಗೂ ತಮ್ಮ ಮಕ್ಕಳ ಆಸಕ್ತಿಗನುಗುಣವಾಗಿ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳ ಸಾಧನೆಗೆ ಪಾಲಕರು ಹಾಗೂ ಶಿಕ್ಷಕರು ನಿರಂತರ ಶ್ರಮಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರೋಣ ತಹಶೀಲ್ದಾರರು, ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP