ಕೊಪ್ಪಳ ಕೃಷಿ ವಿಸ್ತರಣಾ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ
ಕೊಪ್ಪಳ, 15 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಲಭವನ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕೃಷ
ಕೊಪ್ಪಳ : ಕೃಷಿ ವಿಸ್ತರಣಾ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ


ಕೊಪ್ಪಳ : ಕೃಷಿ ವಿಸ್ತರಣಾ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ


ಕೊಪ್ಪಳ : ಕೃಷಿ ವಿಸ್ತರಣಾ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ


ಕೊಪ್ಪಳ, 15 ನವೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಲಭವನ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕೃಷಿ ವಿಸ್ತರಣಾ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ ಅವರು, ಮಕ್ಕಳಿಗಾಗಿ ಇರುವ ಪೋಕ್ಸೋ-2012 ಹಾಗೂ ಬಾಲ್ಯವಿವಾಹ ಕಾಯ್ದೆ-2006 ಹಾಗೂ 2016 ರನ್ವಯ 2018 ನಂತರ ನಡೆದ ಬಾಲ್ಯವಿವಾಹವು ಅಸಿಂಧು ಆಗಿದ್ದು, ಅದು ರದ್ದಾಗುತ್ತದೆ. ಇಂದಿನ ದಿನಗಳಲ್ಲಿ ಮಕ್ಕಳನ್ನು ರಕ್ಷಿಸುವ ಸಂಬ0ಧಿಕರಿ0ದಲೇ ಮಕ್ಕಳ ಅತ್ಯಾಚಾರ ನಡೆಯುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ. ಸಂಬ0ಧಗಳ ಮೌಲ್ಯದ ಬಗ್ಗೆ ಮರೆಯುತ್ತಿದ್ದಾರೆ. ಮಕ್ಕಳು ತಮ್ಮ ರಕ್ಷಣೆಯ ಬಗ್ಗೆ ಜಾಗೃತಿ ವಹಿಸಬೇಕು. ಮಕ್ಕಳಿಗೆ ಕಾನೂನು ಬಗ್ಗೆ ಅರಿವು ಇರಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಿಂದಿನ ಕಾಲದಲ್ಲಿ ಬಾಲ್ಯದ ದಿನಗಳಲ್ಲಿ ಆಡುವ ಆಟಗಳನ್ನು ಮರೆತು ಮೊಬೈಲ್‌ನಲ್ಲಿ ಆನ್‌ಲೈನ್ ಆಟಗಳನ್ನು ಆಡುತ್ತಿರುವುದು ಹೆಚ್ಚಾಗಿ ಕಂಡು ಬ0ದಿದ್ದು, ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕಗಳನ್ನು ಓದಲು ಹಾಗೂ ಬಯಲಿನಲ್ಲಿ ಆಟಗಳನ್ನು ಆಡಬೇಕು ಎಂದು ಮಕ್ಕಳಿಗೆ ತಿಳಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ ರವರು ಮಕ್ಕಳ ದಿನಾಚರಣೆಯ ಕಾರ್ಯಕ್ರಮದ ಉದ್ದೇಶಗಳು ಹಾಗೂ ಬಾಲ ಭವನ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಅನ್ನಪೂರ್ಣ, ಕೃಷಿ ವಿಸ್ತರಣಾ ಕೇಂದ್ರದ ಪ್ರಾಧ್ಯಾಪಕರಾದ ವಾಮನ ಮೂರ್ತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮಾರುತಿ ಚಾಮಾಲಾಪುರ, ಶಿಕ್ಷಕರಾದ ವೀರಯ್ಯ ಭಾಗವಸಿಹಿದ್ದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಶರಣಪ್ಪ ಗದ್ದಿ, ರೂಪಾ ಗಂಧದ, ಸಂಗೀತ ಶಿಕ್ಷಕರಾದ ಬಸಮ್ಮ, ಮೇಲ್ವಿಚಾರಕಿ ಪ್ರೀತಿ ಕೋರೆ, ಸಂಪನ್ಮೂಲ ವ್ಯಕ್ತಿಗಳು, ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿ, ಬಾಲಭವನದ ಸಿಬ್ಬಂದಿ, ಜಿಲ್ಲೆಯ ಶಾಲೆಯ ಮಕ್ಕಳು ಹಾಗೂ ಸರಕಾರಿ ಬಾಲಕರ ಹಾಗೂ ಬಾಲಕಿಯರ ಬಾಲಮಂದಿರ ಮಕ್ಕಳು, ಸಿಬ್ಬಂದಿ ವರ್ಗ, ಶಿಕ್ಷಕರು, ವಲಯ ಮೇಲ್ವಿಚಾರಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande