
ಪಾಟ್ನಾ, 15 ನವೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರದ ಮುಜಫರ್‌ಪುರದಲ್ಲಿ ನಿನ್ನೆ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ
ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಇಬ್ಬರು ಮಕ್ಕಳು, ಅವರ ಪೋಷಕರು ಹಾಗೂ ಮತ್ತೊಬ್ಬ ಕುಟುಂಬ ಸದಸ್ಯೆ ಸೇರಿದ್ದಾರೆ. ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಶ್ಚಿಮ ವಿಭಾಗದ ಡಿಎಸ್‌ಪಿ ಸುಚಿತ್ರಾ ಕುಮಾರಿ ಘಟನೆ ದೃಢಪಡಿಸಿದ್ದು, “ಬೆಂಕಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗಿದೆ ಎಂಬ ಪ್ರಾಥಮಿಕ ಮಾಹಿತಿ ಇದೆ. ವಿಧಿವಿಜ್ಞಾನ ತಂಡದಿಂದ ಪರಿಶೀಲನೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa