
ಗದಗ, 15 ನವೆಂಬರ್ (ಹಿ.ಸ.) :
ಆ್ಯಂಕರ್ : ಕನ್ಹೇರಿ ಮಠದ ಅದೃಶ್ಯ ಶ್ರೀ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ, ಬಾಗಲಕೋಟಿ ಹಾಗೂ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಚೆನ್ನಮ್ಮ ಸರ್ಕಲ್ ನಿಂದ ಆರಂಭವಾದ ಪಾದಯಾತ್ರೆ ಮುಳಗುಂದ ನಾಕಾ ಮಾರ್ಗವಾಗಿ ಡಿಸಿ ಕಚೇರಿ ತಲುಪಿ ನಿರ್ಬಂಧ ತೆರವುಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಶಾಸಕ ಸಿ. ಸಿ ಪಾಟೀಲ ಮಾತನಾಡಿ, ಕಾಡಸಿದ್ದೇಶ್ವರ ಶ್ರೀಗಳು ರೈತರಿಗೆ ಸಾವಯವ ಕೃಷಿಯಲ್ಲಿ ಯಾವ ರೀತಿ ಸುಧಾರಣೆ ತರಬೇಕು ಎನ್ನುವುದನ್ನು ಹೇಳಿ ಕೋಡುತ್ತಾರೆ. ಮತ್ತು ಗರ್ಭಿಣಿಯರಿಗೆ ಸಂಸ್ಕಾರದ ಪಾಠ, ಯುವಕರಿಗೆ ಸಂಸ್ಕ್ರತಿಯ ನೀತಿ ಪಾಠಗಳನ್ನು ಶ್ರೀಗಳು ಹೇಳುತ್ತಾರೆ. ಸರ್ಕಾರ ಮಾಡದ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ. ಅವರು ಹಿಂದೂತ್ವವಾದಿ ಎನ್ನುವ ಒಂದೇ ಒಂದು ಕಾರಣಕ್ಕೆ ಅವರಿಗೆ ನಿರ್ಬಂಧ ಹೇರಿದ್ದು ಸರಿಯಲ್ಲ. ನಿವು ಅವರಿಗೆ ನಿರ್ಬಂಧ ಹೇರಿರಬಹುದು. ಆದರೆ, ಭಕ್ತರ ಮನಸ್ಸಿನಲ್ಲಿ ಅಚ್ಚರಿಯದೇ ಉಳಿದಿದ್ದಾರೆ. ಅವರ ಮೇಲೆ ನಿರ್ಬಂಧ ತೆರವುಗೋಳಿಸಿ ಮುಕ್ತ ವ್ಯವಸ್ಥೆ ಕಲ್ಪಿಸಬೇಕು. ದಬ್ಬಾಳಿಕೆಯಿಂದ ರಾಜ್ಯ ಆಳುವುದು ಸರಿಯಲ್ಲ. ಅಧಿಕಾರ ಶಾಶ್ವತವಲ್ಲ. ಮುಖ್ಯಮಂತ್ರಿಗಳೇ ನಿವು ಅವರ ಮಠಕ್ಕೆ ಒಮ್ಮೆ ಹೋಗಿ ನೋಡಿ. ಆಗ ನಿವು ಮಾಡುವುದು ತಪ್ಪು ಎಂದು ನಿಮಗೆ ಅನಿಸುತ್ತೆ ಎಂದು ಮುಖ್ಯಮಂತ್ರಿಗೆ ಬುದ್ದಿ ಮಾತು ಹೇಳಿದರು.
ಶ್ರೀ ಪ್ರಶಾಂತ ಮಹಾರಾಜರು ಮಾತನಾಡಿ, ಸನಾತನ ಧರ್ಮದ ರಕ್ಷಣೆಯನ್ನು ಕಾಡಸಿದ್ದೇಶ್ವರ ಶ್ರೀಗಳು ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ನಿರ್ಬಂಧ ಹೇರಲಾಗುತ್ತಿದೆ. ಸ್ವಾಮಿಜಿಗಳಿಗೆ ನಿರ್ಬಂಧ ಹೇರುವ ದುಷ್ಟ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಹಿಂದೆ ನಮ್ಮನ್ನು ಹಲವು ದಶಕಗಳ ಕಾಲ ಆಳಿದ ಮೋಘಲರು, ಡಚ್ಕರು, ಪೋರ್ಚಗಿಸರಿಗೆ ನಮ್ಮ ಧರ್ಮಕ್ಕೆ ಏನೂ ಮಾಡಲಾಗಲಿಲ್ಲ. ಕೇವಲ ಒಂದು ಕಾಂಗ್ರೆಸ್ ಸರ್ಕಾರ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಪಾಕಿಸ್ತಾನ್ ಜಿಂದಾಬಾದ್ ಎಂದವರಿಗೆ ಯಾಕೆ ನಿರ್ಬಂಧವಿಲ್ಲ
'ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ, ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡಿದವರಿಗೆ ನಿರ್ಬಂಧವಿಲ್ಲ. ಆದರೆ, ಧರ್ಮ, ದೇಶ ರಕ್ಷಕರಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ. ಹಿಂದೂತ್ವ ವಿರೋಧಿ ದೋರಣೆ ಅನುಸರಿಸಿದರೇ ಬಿಹಾರದಲ್ಲಿ ಕಾಂಗ್ರೆಸ್ ಗೆ ಆದ ಪರಿಸ್ಥಿತಿ ರಾಜ್ಯದಲ್ಲಿಯೂ ಆಗಬಹುದು.' ಎಂದು ಪ್ರಶಾಂತ ಮಹಾರಾಜರು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / lalita MP