
ಶ್ರೀನಗರ, 15 ನವೆಂಬರ್ (ಹಿ.ಸ.) :
ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಒಂಬತ್ತು ಜನರು ಮೃತಪಟ್ಟಿದ್ದು, 29 ಮಂದಿ ಗಾಯಗೊಂಡಿದ್ದಾರೆ.
ಸ್ಫೋಟ ಆಕಸ್ಮಿಕವಾಗಿ ನಡೆದಿದ್ದು, ದುರದೃಷ್ಟಕರ ಎಂದು ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫರಿದಾಬಾದ್‌ನಿಂದ ವಶಪಡಿಸಿಕೊಂಡಿದ್ದ ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳನ್ನು ನೌಗಮ್ ಪೊಲೀಸ್ ಠಾಣೆಯಲ್ಲಿ ಮಾನ್ ದಂಡಗಳ ಪ್ರಕಾರ ಭದ್ರಪಡಿಸಿ ಸಂಗ್ರಹಿಸಲಾಗಿತ್ತು. ಅದರ ರಾಸಾಯನಿಕ ಸಂಯೋಜನೆಯ ಕಾರಣದಿಂದಾಗಿ ಮಾದರಿ ಸಂಗ್ರಹಣೆ ಮತ್ತು ಪರೀಕ್ಷೆಯನ್ನು ಅತ್ಯಂತ ಎಚ್ಚರಿಕೆಯೊಂದಿಗೆ ನಡೆಸಲಾಗುತ್ತಿತ್ತು. ಎಲ್ಲಾ ಮುನ್ನೆಚ್ಚರಿಕೆಗಳಿದ್ದರೂ ಶುಕ್ರವಾರ ರಾತ್ರಿ ಆಕಸ್ಮಿಕ ಸ್ಫೋಟ ಸಂಭವಿಸಿದೆ. ಸ್ಫೋಟದ ನಿಖರ ಕಾರಣವನ್ನು ತನಿಖೆಯಿಂದ ಪತ್ತೆ ಮಾಡಲಾಗುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa