ಸಿರುಗುಪ್ಪ ನಗರಸಭೆ : ಬೀದಿ ನಾಯಿಗಳ ಉಪಟಳ ಕಡಿವಾಣಕ್ಕೆ ಕ್ರಮ
ಸಿರುಗುಪ್ಪ, 15 ನವೆಂಬರ್ (ಹಿ.ಸ.) : ಆ್ಯಂಕರ್ : ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳಲ್ಲಿನ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆ
ಸಿರುಗುಪ್ಪ ನಗರಸಭೆ : ಬೀದಿ ನಾಯಿಗಳ ಉಪಟಳ ಕಡಿವಾಣಕ್ಕೆ ಕ್ರಮ


ಸಿರುಗುಪ್ಪ, 15 ನವೆಂಬರ್ (ಹಿ.ಸ.) :

ಆ್ಯಂಕರ್ : ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳಲ್ಲಿನ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ, ಪರಿಶೀಲಿಸಿ ಬೀದಿ ನಾಯಿಗಳ ಸಂಖ್ಯೆಯ ಮಾಹಿತಿಯನ್ನು ಸಿರುಗುಪ್ಪ ನಗರಸಭೆ ಕಾರ್ಯಾಲಯ ಕಚೇರಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಿ0ದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂಧಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು.

ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅದನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿ0ದ ವಸೂಲಿ ಮಾಡಲಾಗುವುದು.

ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ಕ್ರಮ ವಹಿಸಲಾಗುವುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande