
ಶ್ರೀನಗರ, 15 ನವೆಂಬರ್ (ಹಿ.ಸ.) :
ಆ್ಯಂಕರ್ : ನೌಗಮ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿನ್ನೆ ಸಂಭವಿಸಿದ ಮಾರಕ ಸ್ಫೋಟದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ಶ್ರೀನಗರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನೌಗಮ್ ಪೊಲೀಸ್ ಠಾಣೆಯೊಳಗಿನ ಸ್ಫೋಟದಲ್ಲಿ ಎಸ್‌ಐಎ ಅಧಿಕಾರಿ, ಉಪ ತಹಶೀಲ್ದಾರ್ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿ, 29 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಗೃಹ ಮಂತ್ರಿಯವರ ಭೇಟಿ ಹಿನ್ನೆಲೆಯಲ್ಲಿ ಶ್ರೀನಗರದ ಎಲ್ಲಾ ಪ್ರಮುಖ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ನೌಗಮ್ ಠಾಣೆಯ ಸುತ್ತಮುತ್ತಲಿನ ಪ್ರದೇಶವು ಸಂಪೂರ್ಣವಾಗಿ ಸೀಲ್ ಮಾಡಲಾಗಿದೆ. ಕೇಂದ್ರ ಮತ್ತು ರಾಜ್ಯ ಭದ್ರತಾ ಪಡೆಗಳು ಸ್ಥಳದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa