
ಬಳ್ಳಾರಿ, 15 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ವಿಭಾಗ ಹಾಗೂ ಬಳ್ಳಾರಿ ನರ್ಸಿಂಗ್ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಮಧುಮೇಹ ಮತ್ತು ಯೋಗಕ್ಷೇಮ ಎಂಬ ಘೋಷವಾಕ್ಯದಡಿ ನ.17 ರಂದು ಬೆಳಿಗ್ಗೆ 07 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ವಾಕಾಥಾನ್ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ ಅವರು ವಾಕಾಥಾನ್ ಗೆ ಚಾಲನೆ ನೀಡುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಮಹಮ್ಮದ್ ಹ್ಯಾರೀಸ್ ಸುಮೇರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತಚಿಕಿತ್ಸಕ ಡಾ.ಎನ್.ಬಸರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ., ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಎನ್‌ಸಿಡಿ ಕಾರ್ಯಕ್ರಮ ಸಂಯೋಜಕ ಡಾ.ಜಬೀನ್ ತಾಜ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್ ಅವರು ಸ್ವಾಗತ ಮತ್ತು ನಿರೂಪಿಸುವರು.
ವಾಕಾಥಾನ್ ಮಾರ್ಗ: ಜಿಲ್ಲಾ ಆಸ್ಪತ್ರೆಯಿಂದ ಆರಂಭವಾಗಿ ಹೆಚ್.ಆರ್.ಗವಿಯಪ್ಪ ವೃತ್ತಕ್ಕೆ ತಲುಪಿ ಅಲ್ಲಿಂದ ಮರಳಿ ಜಿಲ್ಲಾ ಆಸ್ಪತ್ರೆಯ ಆವರಣದವರೆಗೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್