
ಶ್ರೀನಗರ, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯ ಒಳಗೆ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರೀ ಸ್ಫೋಟದ ನಂತರ, ಸ್ಥಳವನ್ನು ವಿಧಿವಿಜ್ಞಾನ ಪ್ರಯೋಗಾಲಯ ತಂಡಗಳು ಮತ್ತು ಭದ್ರತಾ ಪಡೆಗಳು ಸಂಪೂರ್ಣವಾಗಿ ಮುಚ್ಚಿದ್ದು, ಸಾಕ್ಷ್ಯ ಸಂಗ್ರಹಣೆ ಮತ್ತು ವೈಜ್ಞಾನಿಕ ವಿಶ್ಲೇಷಣೆಯ ಕೆಲಸ ಮುಂದುವರೆದಿದೆ.
ಈ ದುರಂತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದು, 32 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ರಾಜ್ಯ ತನಿಖಾ ಸಂಸ್ಥೆ ಅಧಿಕಾರಿ, ಮೂವರು ಎಫ್ಎಸ್ಎಲ್ ಸಿಬ್ಬಂದಿ, ಇಬ್ಬರು ಅಪರಾಧ ದೃಶ್ಯ ಛಾಯಾಗ್ರಾಹಕರು, ಮ್ಯಾಜಿಸ್ಟ್ರೇಟ್‌ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಕಂದಾಯ ಸಿಬ್ಬಂದಿ ಮತ್ತು ಸ್ಥಳೀಯ ದರ್ಜಿ ಸೇರಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ತಿಳಿಸಿದ್ದಾರೆ.
ಘಟನೆಯ ಸಂಪೂರ್ಣ ತನಿಖೆ ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಹಾಗೂ ವೈಜ್ಞಾನಿಕ ಸಾಕ್ಷ್ಯ ಸಂಗ್ರಹಣೆಯ ಕೆಲಸ ಸ್ಥಳದಲ್ಲೇ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa