
ಚಿತ್ರದುರ್ಗ, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಎಸ್‍ಜೆಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ, ಹೊಂಬೆಳಕು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆ-2007ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ನ.17ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಡೆಂಟಲ್ ಕಾಲೇಜು ಆವರಣದ ಎಸ್‍ಜೆಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉದ್ಘಾಟನೆ ನೆರವೇರಿಸುವರು. ಎಸ್‍ಜೆಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಎಲ್.ಈಶ್ವರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯ್ ಕುಮಾರ್, ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಬಿ.ಪಿ.ಪ್ರೇಮನಾಥ್ ಭಾಗವಹಿಸುವರು. ಎಸ್‍ಜೆಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಐಕ್ಯೂಎಸಿ ಸಂಯೋಜಕ ಎಂ.ಎಸ್.ಪರಮೇಶ್ವರಪ್ಪ ಉಪಸ್ಥಿತಿ ವಹಿಸುವರು. ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಪ್ರಾಂಶುಪಾಲರು ಮತ್ತು ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಅವರು ಹಿರಿಯರು-ಕಿರಿಯರ ಬಾಂಧವ್ಯ ಕುರಿತು ಹಾಗೂ ಉಪ ಪ್ರಧಾನ ಕಾನೂನು ನೆರವು ಅಭಿರಕ್ಷಕ ಎಂ.ಮೂರ್ತಿ ಅವರು ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆ-2007 ಕುರಿತು ವಿಷಯ ಮಂಡನೆ ಮಾಡುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa