
ಶಿವಮೊಗ್ಗ, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾನವ ಹಕ್ಕು ಆಯೋಗಕ್ಕೆ ಸಂಬಂಧಿಸಿ ಪ್ರಕರಣಗಳ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa