
ವಿಜಯಪುರ, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೊಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತ್ರೈಮಾಸಿಕ ಬದಲಾಗಿ ಇನ್ನೂ ಮುಂದೆ ಮಾಸಿಕ ನವೆಂಬರ್ 1 ರಿಂದ 25ನೇ ದಿನಾಂಕದೊಳಗಾಗಿ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಯುವನಿಧಿ ಯೋಜನೆಯಡಿ ನೊಂದಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ https://sevasindhuservices.karnataka.gov.in ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ: 08352-250383 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande