
ವಿಜಯಪುರ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆಯನ್ನು ತಡೆಗಟ್ಟಲು ಜಿಲ್ಲಾದ್ಯಂತ ಪಿ.ಸಿ.ಮತ್ತುಪಿ.ಎನ್.ಡಿ.ಟಿ. ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪಿ.ಸಿ.ಮತ್ತು ಪಿ.ಎನ್.ಡಿ.ಟಿ. ಮೇಲ್ವಿಚಾರಣ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪಿ.ಸಿ.ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯಡಿಯಲ್ಲಿ ಸ್ಕ್ಯಾನಿಂಗ್ ಸೆಂಟರ್ ನೋಂದಣಿ, ನವೀಕರಣ ಹಾಗೂ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸದರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅನುಮತಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದರು. ಪಿ.ಸಿ.ಮತ್ತು ಪಿ.ಎನ್.ಡಿ.ಟಿ. ಕಾಯ್ದೆ ಕುರಿತು ಅರಿವು ಮೂಡಿಸಲು ಸಂಬ0ಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸೆಂಟರಗಳನ್ನು ಆರಂಭಿಸುವ0ತೆ ಕ್ರಮ ಜರುಗಿಸಬೇಕು ಮುಂಬರುವ ಸಭೆಯೊಳಗಾಗಿ ಎಲ್ಲ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ವರದಿ ಸಲ್ಲಿಸುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದಡಿಯಲ್ಲಿ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರ ಸಮಿತಿ ಸಭೆ: ಕೆ.ಪಿ.ಎಮ್.ಇ. ಕಾಯಿದೆ ಅಡಿಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿರುವ ನೋಂದಣಿಯಾದ ಖಾಸಗಿ ಆರೋಗ್ಯ ಸಂಸ್ಥೆಗಳು ನಿರ್ದಿಷ್ಟ ಪಡಿಸಿದ ಬಣ್ಣದ ಫಲಕಗಳನ್ನು ಅಳವಡಿಸಿದ ವರದಿ ಹಾಗೂ ಫಲಕ ಅಳವಡಿಸದೇ ಇರುವ ಖಾಸಗಿ ಆರೋಗ್ಯ ಸಂಸ್ಥೆಗಳ ವಿರುದ್ಧ ಕ್ರಮ ವಹಿಸುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ಆನಂದ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದಡಿಯಲ್ಲಿ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸುವುದಕ್ಕಾಗಿ ಜಿಲ್ಲಾಧಿಕಾರಿ ಅಥವಾ ಅವರ ಪ್ರತಿನಿಧಿ, ಜಿಲ್ಲಾ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಅವರ ಪ್ರತಿನಿಧಿ, ಜಿಲ್ಲಾ ಅಯುಷ್ ವೈದ್ಯಾಧಿಕಾರಿಗಳು, ರಿಜಿಸ್ಟ್ರಾರ್ ಕರ್ನಾಟಕ ಆಯುರ್ವೇದ ಹಾಗೂ ಯುನಾನಿ ಮಂಡಳಿ, ಜಿಲ್ಲಾ ಹಂತದಲ್ಲಿ ನಾಮ ನಿರ್ದೇಶಿತ ಓರ್ವ ವಕೀಲ ಹಾಗೂ ಓರ್ವ ಸಮಾಜ ಸೇವಕರನ್ನು ನೇಮಿಸಿಕೊಂಡು ಸರ್ಕಾರದ ಅದೇಶದನ್ವಯ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.
ಆಸ್ಪತ್ರೆಗಳಲ್ಲಿ ಪ್ರದರ್ಶನ ಫಲಕಗಳ ಅಳವಡಿಸದಿದ್ದಲ್ಲಿ ಅಂತಹ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿ ಕಾನೂನಿನ್ವಯ ಕ್ರಮ ಜರುಗಿಸಿ ವರದಿ ನೀಡುವಂತೆ ಅವರು ಸಭೆಗೆ ತಿಳಿಸಿದರು. ಸಂಬ0ಧಿಸಿದ ಅಧಿಕಾರಿಗಳು ನಕಲಿ ವೈದ್ಯರ ಕುರಿತಾಗಿ ಆಗಾಗ ಪರಿಶೀಲನೆ ನಡೆಸಬೇಕು ಅವರು ಸೂಚಿಸಿದರು.
ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಕುಮಾರ್ ಗುಣಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ,ಜಿ.ಎಸ್.ಕಡಕೋಳ, ಎಸ.ಜಿ ರೂಢಗಿ, ಪರಸುರಾಮ ಇಟ್ನಳ್ಳಿ, ಪರಶುರಾಮ ದೇವಮಾನೆ, ಗಿರೀಶ ಕುಲ್ಲೊಳ್ಳಿ, ರಾಜಶ್ರೀ ಯಲಿವಾಳ, ವಿಜಯಾ ಬಾಳಿ, ತಾಲೂಕಿನ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande