
ಶ್ರೀನಗರ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಕಾಶ್ಮೀರ ಕಣಿವೆಯಲ್ಲಿ ವೈದ್ಯರನ್ನು ಒಳಗೊಂಡಿರುವ ಭಯೋತ್ಪಾದನಾ ಸಂಚಿನ ತನಿಖೆಗೆ ಸಂಬಂಧಿಸಿದಂತೆ ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ ವಿಭಾಗವು ಇಂದು ಬೆಳಿಗ್ಗೆ ಮೂರು ಜಿಲ್ಲೆಗಳಲ್ಲಿ ಸಮನ್ವಯಿತ ದಾಳಿ ನಡೆಸಿದೆ. ಶ್ರೀನಗರ, ಅನಂತನಾಗ್ ಮತ್ತು ಕುಲ್ಗಮ್ ಜಿಲ್ಲೆಗಳ ಹಲವಾರು ಸ್ಥಳಗಳಲ್ಲಿ ದಾಳಿಗಳು ಏಕಕಾಲದಲ್ಲಿ ಆರಂಭಗೊಂಡಿದ್ದು, ಪ್ರಸ್ತುತ ಶೋಧ ಕಾರ್ಯಗಳು ಮುಂದುವರಿದಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಶ್ರೀನಗರದ ಶಿರೀನ್ ಬಾಗ್ ಪ್ರದೇಶದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೂ ಶೋಧ ನಡೆಸಲಾಗುತ್ತಿದೆ. ಕೆಲವು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸು, ಮಾಹಿತಿ ಅಥವಾ ಲಾಜಿಸ್ಟಿಕ್ ಸಹಾಯ ಮಾಡಿರುವ ಶಂಕೆಯ ಮೇರೆಗೆ ದಾಳಿ ನಡೆಯುತ್ತಿದೆ ಎನ್ನಲಾಗಿದೆ.
ಸಂತ್ರಸ್ತ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಆಸ್ಪತ್ರೆ, ನಿವಾಸ ಮತ್ತು ಖಾಸಗಿ ಕ್ಲಿನಿಕ್‌ಗಳ ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದು, ಶಂಕಿತರಿಂದ ಡಿಜಿಟಲ್ ಸಾಧನಗಳು, ಮೊಬೈಲ್, ಲ್ಯಾಪ್‌ಟಾಪ್‌ಗಳನ್ನು ಕೂಡಾ ಜಪ್ತಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ವೈದ್ಯರು ಮತ್ತು ವೈದ್ಯಕೀಯ ಮೂಲಸೌಕರ್ಯವನ್ನು ಬಳಸಿಕೊಂಡು ಭಯೋತ್ಪಾದನಾ ಜಾಲ ತಂತ್ರದ ಒಂದು ಹೊಸ ಮಾದರಿ ಕಂಡುಬಂದಿರುವ ಹಿನ್ನೆಲೆ ಈ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ. ಆದರೆ ಇದಕ್ಕೆ ಸಂಬಂಧಿಸಿದ ಅಧಿಕೃತ ಪ್ರಕಟಣೆ ಇನ್ನೂ ಹೊರಬಂದಿಲ್ಲ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa