
ವಿಜಯಪುರ, 19 ನವೆಂಬರ್ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ಪ್ರಶಸ್ತಿ ಹಾಗೂ ಪ್ರೋತ್ಸಾಹಧನ ನೀಡಲು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಾನಾ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಕ್ರೀಡಾಪಟುಗಳು https://sevasindhu.karnataka.gov.in ವೆಬ್‌ಸೈಟ್‌ನಲ್ಲಿ ಡಿಸೆಂಬರ್ 3ರರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ- 08352-251085 ಹಾಗೂ 7019008443 ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande