
ನವದೆಹಲಿ, 19 ನವೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಲಕ್ಷ್ಮಿಬಾಯಿ ಅವರ ಜನ್ಮ ವಾರ್ಷಿಕೋತ್ಸವ ದಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಸ್ಮರಿಸಿದ ಮೋದಿ, “ಅವರ ಜನ್ಮ ವಾರ್ಷಿಕೋತ್ಸವದಂದು ಗೌರವಗಳು” ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.
ರಾಣಿ ಲಕ್ಷ್ಮಿಬಾಯಿ ಅವರ ಶೌರ್ಯವನ್ನು ಪ್ರಧಾನಮಂತ್ರಿ ಪ್ರಶಂಸಿಸಿ, “ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಧೈರ್ಯ, ದೇಶರಕ್ಷಣೆಗೆ ಮಾಡಿದ ಹೋರಾಟ ಇಂದು ಕೂಡ ದೇಶವಾಸಿಗಳಿಗೆ ಪ್ರೇರಣೆ ನೀಡುತ್ತದೆ,” ಎಂದು ಹೇಳಿದ್ದಾರೆ. ರಾಷ್ಟ್ರವು ಅವರ ತ್ಯಾಗ ಮತ್ತು ಹೋರಾಟವನ್ನು ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನ ಮಂತ್ರಿ ನಮನ ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa