
ಬೆಂಗಳೂರು, 19 ನವೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಕಾರ್ಖಾನೆಗಳು, ಕೈಗಾರಿಕೋದ್ಯಮಿಗಳು ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಕೈಗಾರಿಕೆಗಳ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹಮದ್, ಸಂಸದರಾದ ಈ.ತುಕಾರಾಮ್ , ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರುಗಳಾದ ಪ್ರಸಾದ್ ಅಬ್ಬಯ್ಯ, ಅನ್ನಪೂರ್ಣಮ್ಮ ಭಾಗವಹಿಸಿದ್ದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅಡ್ವೊಕೇಟ್ ಜನರಲ್ ಶಶಿ ಕುಮಾರ್ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa