ಜಲ ಸಂರಕ್ಷಣೆಯಲ್ಲಿ ಕೋಲಾರ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ
ಜಲ ಸಂರಕ್ಷಣೆಯಲ್ಲಿ ಕೋಲಾರ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ
ಚಿತ್ರ : ಕೋಲಾರ ಜಿಲ್ಲೆಗೆ ಜಲ ಸಂಚಯ ಜನ ಭಾಗಿದಾರಿ ಅಭಿಯಾನದಡಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ನೂರಾರು ಕೆರೆಗಳ ಪುನಶ್ಚೇತನ, ರಾಜಕಾಲುವೆಗಳ ಅಭಿವೃದ್ಧಿ ಮಾಡಲಾಗಿದೆ. ಇದು ಅಂತರ್ಜಲ ವೃದ್ಧಿ ಮತ್ತು ಕೃಷಿಗೆ ನೀರು ಒದಗಿಸಿದೆ. ಜಿಲ್ಲೆಗೆ ೨೫ ಲಕ್ಷ ರೂ. ನಗದು ಬಹುಮಾನವನ್ನು ಪ್ರವೀಣ್ ಬಾಗೇವಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಡೆದರು.


ಕೋಲಾರ, ೧೯ ನವಂಬರ್ (ಹಿ.ಸ.) :

ಆ್ಯಂಕರ್ : ಕೋಲಾರ ಜಿಲ್ಲೆಗೆ ಜಲ ಸಂಚಯ ಜನ ಭಾಗಿದಾರಿ ಅಭಿಯಾನದಡಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಜಲ ಸಂರಕ್ಷಣೆ ಮತ್ತು ಪ್ರಕೃತಿ ಸಂರಕ್ಷಣಾ ಕಾಮಗಾರಿಗಳನ್ನು ಜಿಲ್ಲೆಯಲ್ಲಿ ಉತ್ತಮವಾಗಿ ಅನುಷ್ಠಾನಗೊಳಿಸಲಾಗಿತ್ತು. ನೂರಾರು ಕೆರೆಗಳ ಪುನಶ್ಚೇತನ, ರಾಜಕಾಲುವೆಗಳ ಅಭಿವೃದ್ಧಿ ಮಾಡಲಾಗಿದೆ. ಇದು ಅಂತರ್ಜಲ ವೃದ್ಧಿ ಮತ್ತು ಕೃಷಿಗೆ ನೀರು ಒದಗಿಸಿದೆ. ಜಿಲ್ಲೆಗೆ ೨೫ ಲಕ್ಷ ರೂ. ನಗದು ಬಹುಮಾನವೂ ದೊರಕಿದೆ. ಕೋಲಾರ ಜಿಲ್ಲೆ ಬೆಂಗಳೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದೆ.

ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ, ಆಲಂಗೂರು, ಅಂಗೋಂಡಹಳ್ಳಿ, ದೇವರಾಯಸಮುದ್ರ, ಮುಡಿಯನೂರು, ಕುರುಡುಮಲೆ, ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿ, ಮಾಲೂರು ತಾಲ್ಲೂಕಿನ ಶಿವಾರಪಟ್ಟಣ, ಕೋಲಾರ ತಾಲ್ಲೂಕಿನ ವಕ್ಕಲೇರಿ ಹಾಗೂ ಬಂಗಾರಪೇಟೆ ತಾಲ್ಲೂಕಿನ ಮಾವಹಳ್ಳಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ನರೇಗಾ, ಜಲ ಜೀವನ್ ಮಿಷನ್, ಅಟಲ್ ಭೂಜಲ್ ಸೇರಿದಂತೆ ಅರಣ್ಯ, ಕೃಷಿ, ತೋಟಗಾರಿಕೆ ಇಲಾಖೆ ಕಾಮಗಾರಿಗಳನ್ನು ಪರಿಶೀಲಿಸಿದರು.

ಜಲ ಸಂರಕ್ಷಣೆ ಮತ್ತು ಪ್ರಕೃತಿ ಸಂರಕ್ಷಣೆಯ ವಿಶಿಷ್ಟ ಕಾಮಗಾರಿ ಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಿದ್ದರಿಂದ ಜಲ ಸಂಚಯ ಜನ ಭಾಗಿದಾರಿ (ಜೆಎಸ್ಜೆಬಿ) ಅಭಿಯಾನದಡಿ ಕೋಲಾರ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ದೊರಕಿದೆ.

ಕೋಲಾರ ಜಿಲ್ಲೆಯಲ್ಲಿನೂರಾರು ಕೆರೆಗಳನ್ನು ಪುನಶ್ಚೇನಗೊಳಿಸಿದ್ದು, ಕೆರೆಗಳಿಗೆ ಮಳೆ ನೀರು ಬರಲು ರಾಜಕಾಲುವೆಗಳ ಪುನಶ್ಚೇತನಗೊಳಿಸಿ ರಾಜ್ಯ ಪ್ರಶಸ್ತಿಯನ್ನು ಪಡೆದುಕೊಳ್ಳಲಾಗಿತ್ತು. ಜಿಲ್ಲೆಯಲ್ಲಿಜಲಸಂರಕ್ಷಣೆಯ ಪ್ರಗತಿ ಪರಿಶೀಲಿಸಿದ ಕೇಂದ್ರದ ಜಲ ಸಂಚಯ ಜನ್ ಭಾಗೀದಾರಿ ವಿಭಾಗದಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಜಲಮೂಲಗಳ ಸಂರಕ್ಷಣೆಗೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಜಲಶಕ್ತಿ ಅಭಿಯಾನದ ಚಟುವಟಿಕೆಗಳನ್ನು ಜಿಲ್ಲೆಯಲ್ಲಿಯಶಸ್ವಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿತ್ತು. ಇದರ ಫಲವಾಗಿ ಪ್ರಶಸ್ತಿಯೊಂದಿಗೆ ೨೫ ಲಕ್ಷ ರೂ. ನಗದು ಬಹುಮಾನವೂ ಲಭಿಸಿದೆ.

ಯಾವ ರಾಜ್ಯಕ್ಕೆ ಪ್ರಶಸ್ತಿ ಸಿಕ್ಕಿದೆ?

ಅಭಿಯಾನದಡಿ ರಾಜ್ಯಗಳನ್ನು ೫ ವಲಯಗಳಾಗಿ ವಿಂಗಡಿಸಲಾಗಿತ್ತು. ೩ನೇ ವಲಯದಲ್ಲಿಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿದ್ದು, ಈ ಪೈಕಿ ಕರ್ನಾಟಕದ ೭ ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದೆ. ಇದರಲ್ಲಿ ಬೆಂಗಳೂರು ವಿಭಾಗದಲ್ಲಿ ಕೋಲಾರ ಜಿಲ್ಲೆಯು ೧ನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.

ಜಲ ಸಂಚಯ ಪೋರ್ಟಲ್ನಲ್ಲಿ ಕಾಮಗಾರಿ ಮಾಹಿತಿ:ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ) ಹಾಗೂ ಇತರೆ ಯೋಜನೆಗಳಡಿ ಕೋಲಾರ ಜಿಲ್ಲೆಯು ೨೦೨೪ ಏಪ್ರಿಲ್ ೧ರಿಂದ ೨೦೨೫ರ ಮಾರ್ಚ್ ೩೧ರವರೆಗೆ ಅಂದಾಜು ೮,೪೭೦ ಜಲಸಂರಕ್ಷಣೆ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಜಲಸಂಚಯ ಪೋರ್ಟಲ್ನಲ್ಲಿ ದಾಖಲಿಸಲಾಗಿತ್ತು.

ಇವುಗಳಲ್ಲಿವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳಾದ ಬದು ನಿರ್ಮಾಣ, ಕೊಳವೆಬಾವಿ ಮರುಪೂರಣ ಪಿಟ್, ಸೋಕ್ಪಿಟ್, ಸಮಗ್ರ ಕೆರೆ ಅಭಿವೃದ್ಧಿ, ಕಟ್ಟೆಗಳ ಅಭಿವೃದ್ಧಿ, ಕಲ್ಯಾಣಿಗಳ ಜೀರ್ಣೋದ್ಧಾರ, ಮಳೆ ನೀರು ಕೊಯ್ಲು, ತೆರೆದ ಬಾವಿ, ನಾಲಾ ಹೊಳೆತ್ತುವುದು, ಚೆಕ್ ಡ್ಯಾಮ್ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿಜಿಲ್ಲೆಗೆ ಪ್ರಶಸ್ತಿ ಲಭಿಸಿದೆ.

ನೀರಿಗಾಗಿ ಒಂದಾಗಿ, ಪ್ರತಿ ಹನಿ ನೀರನ್ನು ಸಂರಕ್ಷಿಸಿ’ ಎಂಬ ಧ್ಯೇಯದೊಂದಿಗೆ ಜಲಸಂಚಯ ಜನ ಭಾಗಿದಾರಿ ೧.೦ ಅಭಿಯಾನವನ್ನು ಕೇಂದ್ರ ಸರಕಾರ ಅನುಷ್ಠಾನಗೊಳಿಸಿದೆ. ಈ ಅಭಿಯಾನದಡಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು, ಮಳೆ ನೀರನ್ನು ಸಂಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನುಬೆಳೆಸುವುದು ಹವಾಮಾನ ಸ್ಥಿತಿಗತಿ ಉತ್ತೇಜಿಸುವುದು ಮತ್ತು ನೀರಿನ ಗುಣಮಟ್ಟವನ್ನು ಸುಧಾರಿಸುವ ಗುರಿ ಹೊಂದಲಾಗಿದೆ.

ಅಭಿಯಾನದಡಿ ಯಾವ ಯಾವ ಕಾಮಗಾರಿಗಳು

ಕೊಳವೆಬಾವಿ ಮರುಪೂಣ, ಸಮಗ್ರ ಕೆರೆ, ಕಟ್ಟೆ ಅಭಿವೃದ್ಧಿ, ಕಲ್ಯಾಣಿಗಳ ಜೀರ್ಣೋದ್ಧಾರ, ಮಳೆ ನೀರು ಕೊಯ್ಲು, ಚೆಕ್ ಡ್ಯಾಮ್ ಕಾಮಗಾರಿ ಅನುಷ್ಠಾನದಲ್ಲಿ ಕೋಲಾರ ಜಿಲ್ಲೆಉತ್ತಮ ಪ್ರಗತಿ ಸಾಧಿಸಿದೆ.

ಜಲಶಕ್ತಿ ಉದ್ದೇಶವೇನು: ನೀರಿನ ಕೊರತೆ ನಿವಾರಿಸುವುದು, ಮಳೆ ನೀರನ್ನು ಹರಿಯುವಂತೆ ಮಾಡುವುದು, ಹರಿಯುವ ನೀರನ್ನು ತಡೆಯುವುದು, ತಡೆದ ನೀರನ್ನು ಇಂಗಿಸುವುದು, ಜಲ ಸಂಪನ್ಮೊಲ ಸಂರಕ್ಷಣೆ, ಮರು ಸ್ಥಾಪನೆ, ಮರುಬಳಕೆಗೆ ಉತ್ತೇಜಿಸುವುದು, ಅದ್ಬತ ಸರೋವರಗಳ ರಚನೆ ಮತ್ತು ನವೀಕರಣದ ಮೂಲಕ ನೀರಿನ ಸಂಗ್ರಹಣೆ ಹೆಚ್ಚಿಸುವುದು ಜಲಶಕ್ತಿ ಅಭಿಯಾನದ ಉದ್ದೇಶವಾಗಿದೆ.

ಜಲ ಸಂಚಯ ಜನ ಭಾಗಿದಾರಿ ಅಭಿಯಾನದಡಿ ಜಲ ಸಂರಕ್ಷಣೆ ಹಾಗೂ ಮಳೆ ನೀರಿನ ಸಂಗ್ರಹಣೆಯಂತಹ ಚಟುವಟಿಕೆಗಳಲ್ಲಿ ಸಮುದಾಯದ ಭಾಗವಹಿಸುವಿಕೆ ಬಲಪಡಿಸುವುದು, ಜನರಿಗೆ ನೀರಿನ ಮಹತ್ವ ನೀರಿನ ಸಂರಕ್ಷಣೆ ವಿಧಾನಗಳ ಬಗ್ಗೆ ಅರಿವು ಮೂಡಿಸುವಲ್ಲಿಕೋಲಾರ ಜಿಲ್ಲೆಉತ್ತಮ ಸಾಧನೆ ಮಾಡಿದೆ. ನಮ್ಮ ಈ ಪರಿಶ್ರಮಕ್ಕಾಗಿ ಪಶಸ್ತಿ ಲಭಿಸಿದೆ.

ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲದೆ ಇರುವುದರಿಂದ ಜಿಲ್ಲೆಯಲ್ಲಿಜಲ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ, ಕೇಂದ್ರ ನೋಡಲ್ ಅಧಿಕಾರಿಗಳ ತಂಡ ಜಿಲ್ಲೆಗೆ ಆಗಮಿಸಿ ಕಾಮಗಾರಿಗಳನ್ನು ಪರಿಶೀಲಿಸಿ ವರದಿ ನೀಡಿತ್ತು. ಈ ಹಿನ್ನೆಲೆಯಲ್ಲಿಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ.

ಚಿತ್ರ : ಕೋಲಾರ ಜಿಲ್ಲೆಗೆ ಜಲ ಸಂಚಯ ಜನ ಭಾಗಿದಾರಿ ಅಭಿಯಾನದಡಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ನೂರಾರು ಕೆರೆಗಳ ಪುನಶ್ಚೇತನ, ರಾಜಕಾಲುವೆಗಳ ಅಭಿವೃದ್ಧಿ ಮಾಡಲಾಗಿದೆ. ಇದು ಅಂತರ್ಜಲ ವೃದ್ಧಿ ಮತ್ತು ಕೃಷಿಗೆ ನೀರು ಒದಗಿಸಿದೆ. ಜಿಲ್ಲೆಗೆ ೨೫ ಲಕ್ಷ ರೂ. ನಗದು ಬಹುಮಾನವನ್ನು ಪ್ರವೀಣ್ ಬಾಗೇವಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಡೆದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande