ಕ್ರೀಡೆಯಲ್ಲಿ ಭಾಗವಹಿಸಿ ಮಾನಸಿಕ ಒತ್ತಡ ನಿವಾರಿಸಿಕೊಳ್ಳಿ : ಡಾ.ಬಸವರಾಜ ಕೆ.ಎನ್
ಬಳ್ಳಾರಿ, 19 ನವೆಂಬರ್ (ಹಿ.ಸ.) : ಆ್ಯಂಕರ್ : ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಲಿದ್ದು, ಪೊಲೀಸ್ ಇಲಾಖೆಯ ಅಧಿಕಾರಿ-ಸಿಬ್ಬಂದಿ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಶಾರೀರಿಕ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕು ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ
ಕ್ರೀಡೆಯಲ್ಲಿ ಭಾಗವಹಿಸಿ ಮಾನಸಿಕ ಒತ್ತಡ ನಿವಾರಿಸಿಕೊಳ್ಳಿ: ಡಾ.ಬಸವರಾಜ ಕೆ.ಎನ್


ಕ್ರೀಡೆಯಲ್ಲಿ ಭಾಗವಹಿಸಿ ಮಾನಸಿಕ ಒತ್ತಡ ನಿವಾರಿಸಿಕೊಳ್ಳಿ: ಡಾ.ಬಸವರಾಜ ಕೆ.ಎನ್


ಕ್ರೀಡೆಯಲ್ಲಿ ಭಾಗವಹಿಸಿ ಮಾನಸಿಕ ಒತ್ತಡ ನಿವಾರಿಸಿಕೊಳ್ಳಿ: ಡಾ.ಬಸವರಾಜ ಕೆ.ಎನ್


ಕ್ರೀಡೆಯಲ್ಲಿ ಭಾಗವಹಿಸಿ ಮಾನಸಿಕ ಒತ್ತಡ ನಿವಾರಿಸಿಕೊಳ್ಳಿ: ಡಾ.ಬಸವರಾಜ ಕೆ.ಎನ್


ಕ್ರೀಡೆಯಲ್ಲಿ ಭಾಗವಹಿಸಿ ಮಾನಸಿಕ ಒತ್ತಡ ನಿವಾರಿಸಿಕೊಳ್ಳಿ: ಡಾ.ಬಸವರಾಜ ಕೆ.ಎನ್


ಬಳ್ಳಾರಿ, 19 ನವೆಂಬರ್ (ಹಿ.ಸ.) :

ಆ್ಯಂಕರ್ : ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಲಿದ್ದು, ಪೊಲೀಸ್ ಇಲಾಖೆಯ ಅಧಿಕಾರಿ-ಸಿಬ್ಬಂದಿ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಶಾರೀರಿಕ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕು ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್ ಅವರು ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನ.19 ರಿಂದ ನ.21 ರ ವರೆಗೆ ನಡೆಯುವ ವಾರ್ಷಿಕ ಕ್ರೀಡಾಕೂಟಗಳಿಗೆ ಪಾರಿವಾಳ ಮತ್ತು ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಕ್ರೀಡೆಯಲ್ಲಿ ಗೆಲ್ಲುವುದಿಕ್ಕಿಂತ ಮುಖ್ಯವಾಗಿ ಭಾಗವಹಿಸುವುದು ಮುಖ್ಯ. ಎದುರಾಳಿಯ ಜೊತೆ ಗೌರವಪೂರ್ವಕವಾಗಿ ನಡೆದುಕೊಳ್ಳಬೇಕು. ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಹೊಂದಿ ಕ್ರೀಡೆಯ ನೀತಿ-ನಿಯಮಗಳನ್ನು ಪಾಲಿಸುವ ಮೂಲಕ ತೀರ್ಪುಗಾರರು ನೀಡುವ ತೀರ್ಪಿಗೆ ಬದ್ಧರಾಗಿರಬೇಕು ಎಂದರು.

ಪೊಲೀಸ್ ಇಲಾಖೆಯು ಸಮಾಜದಲ್ಲಿ ನಡೆಯುವ ಎಲ್ಲಾ ಸಮಸ್ಯೆಗಳಿಗೆ ನೇರವಾಗಿ ಮತ್ತು ಪರೋಕ್ಷವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಡೆಯುವ ಸೈಬರ್ ಕ್ರೆöÊಮ್, ಮಾದಕ ವಸ್ತು ಬಳಕೆ, ಅಕ್ರಮ ಸಾಗಾಣಿಕೆ ಇನ್ನಿತರೆ ಹೊಸ-ಹೊಸ ಅಪರಾಧ ಚಟುವಟಿಕೆಗಳ ಸವಾಲುಗಳನ್ನು ಪೊಲೀಸ್ ಇಲಾಖೆಯು ದಿನನಿತ್ಯ ಎದುರಿಸುತ್ತಾರೆ. ಇಂತಹ ಒತ್ತಡದ ಕೆಲಸಗಳ ನಡುವೆ ಮೂರು ದಿನಗಳ ಕಾಲ ನಡೆಯುವ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ದೈನಂದಿನ ಒತ್ತಡ ಕೆಲಸ ಕಾರ್ಯದಿಂದ ವಿಮುಕ್ತರಾಗಿ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರ ಪ್ರತಿಯೊಂದು ಸಮಸ್ಯೆಗಳಿಗೆ ಪೊಲೀಸ್ ಇಲಾಖೆಯ ಅಗತ್ಯತೆ ಇದ್ದು, ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಉತ್ತಮ ರೀತಿಯಲ್ಲಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕು ಎಂದರು.

ಕೆಲಸದ ಒತ್ತಡದ ನಡುವೆ ವರ್ಷಪೂರ್ತಿ ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮೂರು ದಿನಗಳ ಕಾಲ ನಡೆಯುವ ವಾರ್ಷಿಕ ಕ್ರೀಡೆಯಲ್ಲಿ ಪ್ರತಿಯೊಬ್ಬರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಒತ್ತಡ ನಿವಾರಿಸಿಕೊಳ್ಳಬಹುದು ಎಂದು ಹೇಳಿದರು.

ಕಳೆದ ಬಾರಿಯ ವಾರ್ಷಿಕ ಕ್ರೀಡಾಕೂಟದ ಚಾಂಪಿಯನ್ ಕೃಷ್ಣನಾಯಕ್ ಅವರು ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ನೀಡಿ ಬೆಳಗಿಸಿದರು.

ಆಕರ್ಷಕ ಪಥಸಂಚಲನ : ಬಳ್ಳಾರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025ರ ಅಂಗವಾಗಿ ಬಳ್ಳಾರಿ ಉಪವಿಭಾಗದ ತುಂಗಾ ತಂಡ, ಬಳ್ಳಾರಿ ನಗರ ಕೋಟೆ ತಂಡ, ಮಹಿಳಾ ವಿಭಾಗದ ದುರ್ಗಾ ತಂಡ, ಸಿರುಗುಪ್ಪ ಉಪ ವಿಭಾಗದ ವೇದಾವತಿ ತಂಡ, ತೋರಣಗಲ್ಲು ಉಪ ವಿಭಾಗದ ಸ್ಕಂದಗಿರಿ ತಂಡ, ಸಂಸ್ಕೃತಿ ತಂಡ ಒಟ್ಟು 6 ತಂಡಗಳಿ0ದ ಆಕರ್ಷಕ ಪಥಸಂಚಲನ ನಡೆಯಿತು.

ಸ್ಪರ್ಧೆಗಳು : ಪೊಲೀಸ್ ಪುರುಷ ಸಿಬ್ಬಂದಿಗಳಿಗಾಗಿ 800 ಮೀಟರ್ ಓಟ, ಪುರುಷ ಮತ್ತು ಮಹಿಳಾ ಸಿಬ್ಬಂದಿಗಳಿಗಾಗಿ 100 ಮೀಟರ್ ಓಟ, ಉದ್ದ ಜಿಗಿತ, ಪುರುಷರಿಗಾಗಿ ಜಾವೆಲಿನ್ ಥ್ರೋ, ಕಬ್ಬಡ್ಡಿ, ಟಾಗ್ ಆಪ್ ವಾರ್ ಮತ್ತು ಇತರೆ ಸ್ಪರ್ಧೆಗಳು. ಪೊಲೀಸ್ ಅಧಿಕಾರಿಗಳಿಗಾಗಿ 100 ಮೀಟರ್ ವಾಕ್, ಗುಂಡು ಎಸೆತ, ಎತ್ತರ ಜಿಗಿತ, ಜಾವೆಲಿನ್ ಥ್ರೋ, ವಾಲಿ ವಾಲ್, 100 ಮೀಟರ್ ಓಟ, 400 ಮೀಟರ್ ಓಟ ಮತ್ತು ಇತರೆ ಸ್ಪರ್ಧೆಗಳು. ಗುಂಪು ಸ್ಪರ್ಧೆಗಳಲ್ಲಿ ಕಬಡ್ಡಿ, ವಾಲಿ ಬಾಲ್, ಮ್ಯೂಜಿಕಲ್ ಚೇರ್, ಲೇಮನ್ ಸ್ಪೂನ್ ಮತ್ತು ಇತರೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನವೀನ್ ಕುಮಾರ್, ಕೆ.ಪಿ.ರವಿಕುಮಾರ್ ಸೇರಿದಂತೆ ಜಿಲ್ಲೆಯ ಡಿವೈಎಸ್‌ಪಿ, ಸಿಪಿಐ, ಪಿಎಸ್‌ಐ ಪೊಲೀಸ್ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ, ಕ್ರೀಡಾ ಪಟುಗಳು ಹಾಗೂ ಕುಟುಂಬ ವರ್ಗ, ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande