ಪುಟ್ಟಪರ್ತಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಹೈದರಾಬಾದ್, 19 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಪುಟ್ಟಪರ್ತಿಯ ಸತ್ಯಸಾಯಿ ಮಹಾಸಮಾಧಿಗೆ ಭೇಟಿ ನೀಡಿದರು. ಸತ್ಯಸಾಯಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ಪ್ರಧಾನಿಗಳಿಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಮಾನ ನಿಲ್ದಾಣದಲ್ಲಿ ಸ್ವಾಗತ
Pm


ಹೈದರಾಬಾದ್, 19 ನವೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಪುಟ್ಟಪರ್ತಿಯ ಸತ್ಯಸಾಯಿ ಮಹಾಸಮಾಧಿಗೆ ಭೇಟಿ ನೀಡಿದರು.

ಸತ್ಯಸಾಯಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ಪ್ರಧಾನಿಗಳಿಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದರು.

ಹಿಲ್ ವ್ಯೂ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸತ್ಯಸಾಯಿ ಶತಮಾನೋತ್ಸವದ ಸ್ಮರಣಾರ್ಥವಾಗಿ ನೂರು ರೂಪಾಯಿ ನಾಣ್ಯ ಮತ್ತು ನಾಲ್ಕು ಅಂಚೆ ಚೀಟಿಗಳನ್ನು ಅನಾವರಣಗೊಳಿಸಲಿದ್ದಾರೆ.

ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande