
ವಿಜಯಪುರ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲಾ ಎನ್.ಸಿ.ಡಿ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದಿಕ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಎ.ವಿ.ಎಸ್ ಆಯುರ್ವೇದಿಕ ಮಹಾವಿದ್ಯಾಲಯದಲ್ಲಿ ವಿಶ್ವ ಮಧುಮೇಹ ದಿನಾಚರಣೆ-2025 ಅಂಗವಾಗಿ ಉಚಿತ ಮಧುಮೇಹ ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ಎನ್.ಸಿ.ಡಿ ವಿಭಾಗದ ವೈದ್ಯ ಅಕ್ಷಯ ಪಾಟೀಲ ಅವರು ಮಾತನಾಡಿ, ಜೀವನಶೈಲಿ, ಅಸಮತೋಲಿತ ಆಹಾರ, ದೈಹಿಕ ಚಟುವಟಿಕೆ ಇಲ್ಲದಿರುವುದು ಮಧುಮೇಹ ರೋಗಕ್ಕೆ ಮುಖ್ಯ ಕಾರಣಗಳಾಗಿವೆ. ಉತ್ತಮ ಆಹಾರ ಕ್ರಮ, ಜೀವನ ಶೈಲಿಯಲ್ಲಿ ಬದಲಾವಣೆ ಹಾಗೂ ನಿಯಮಿತ ವ್ಯಾಯಾಮ ಮತ್ತು ಯೋಗಗಳಿಂದ ಮಧುಮೇಹ ರೋಗದಿಂದ ದೂರವಿರಬಹುದು ಎಂದು ಹೇಳಿದರು.
ಆಗಾಗ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ರೋಗವನ್ನು ಬೇಗ ಗುರುತಿಸಿ ಸಕಾಲದಲ್ಲಿ ಉತ್ತಮ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಅಶೋಕ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಅಪ್ಪಾಸಾಹೇಬ ಇನಾಮದಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿಯ ಡಾ.ಸುರೇಶ ಪಾಸ್ತಾಪುರ, ಡಾ ಪ್ರೀಯದರ್ಶಿನಿ ಕೆಂಚರಡ್ಡಿ, ಎ.ವಿ.ಎಸ್. ಆಯುರ್ವೇದಿಕ ಮಹಾವಿದ್ಯಾಲಯ ರೋಗನಿಧಾನ ವಿಭಾಗದ ಮುಖ್ಯಸ್ಥರಾದ ಡಾ.ಸೀತಾ ಬಿರಾದಾರ ಹಾಗೂ ಡಾ.ಸುಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande