ರಾಷ್ಟ್ರಪತಿ–ರಾಜ್ಯಪಾಲರಿಗೆ ಕಾಲಮಿತಿ ನಿಗದಿ ಸಾಧ್ಯವಿಲ್ಲ : ಸರ್ವೋಚ್ಚ ನ್ಯಾಯಾಲಯ
ನವದೆಹಲಿ, 20 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ವಿಧಾನ ಸಭೆಗಳು ಅಂಗೀಕರಿಸಿದ ಮಸೂದೆಗಳ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರು ನಿರ್ಧಾರ ಕೈಗೊಳ್ಳಲು ಸಮಯ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಐದ
Supreme Court


ನವದೆಹಲಿ, 20 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ವಿಧಾನ ಸಭೆಗಳು ಅಂಗೀಕರಿಸಿದ ಮಸೂದೆಗಳ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರು ನಿರ್ಧಾರ ಕೈಗೊಳ್ಳಲು ಸಮಯ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಈ ಕುರಿತು ನೋಟಿಸ್ ಜಾರಿ ಮಾಡಿ, ರಾಷ್ಟ್ರಪತಿ–ರಾಜ್ಯಪಾಲರ ಸಂವಿಧಾನಿಕ ಅಧಿಕಾರಗಳ ಬಗ್ಗೆ ಸ್ಪಷ್ಟನೆ ನೀಡಿದೆ.

ಪೀಠವು ರಾಜ್ಯಪಾಲರು ಮಸೂದೆಗಳ ಪರಿಶೀಲನೆಯನ್ನು ಅನಿರ್ದಿಷ್ಟವಾಗಿ ವಿಳಂಬ ಮಾಡುವಂತಿಲ್ಲ ಎಂದು ಕಠಿಣವಾಗಿ ಅಭಿಪ್ರಾಯಪಟ್ಟಿದೆ.

ಮಸೂದೆಗಳ ಕುರಿತು ರಾಜ್ಯಪಾಲರು ನಾಲ್ಕು ಆಯ್ಕೆಗಳನ್ನು ಬಳಸಬಹುದು—ಅಂಗೀಕಾರ, ತಡೆ, ವಿಧಾನ ಸಭೆಗೆ ಹಿಂತಿರುಗಿಸುವುದು ಅಥವಾ ರಾಷ್ಟ್ರಪತಿಗೆ ಉಲ್ಲೇಖಿಸುವುದು. ವಿಳಂಬ ಮಾಡಿದಲ್ಲಿ, ನ್ಯಾಯಾಲಯ ಹಸ್ತಕ್ಷೇಪ ಮಾಡುವ ಸಾಧ್ಯತೆಯನ್ನು ಕೂಡ ಸೂಚಿಸಿದೆ.

ಅದೇ ವೇಳೆ, ವಿಧಾನ ಸಭೆ ಅಂಗೀಕರಿಸಿದ ಮಸೂದೆಗಳನ್ನು “ಅಂಗೀಕಾರವಾದವು” ಎಂದು ಪರಿಗಣಿಸಲು ಸುಪ್ರೀಂ ಕೋರ್ಟ್‌ಗೆ ವಿಧಿ 142 ಅಡಿಯಲ್ಲಿ ಅಧಿಕಾರವಿಲ್ಲ ಎಂದು ಪೀಠ ತಿಳಿಸಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143(1) ವಿಧಿಯಡಿ ಸಲ್ಲಿಸಿದ ಉಲ್ಲೇಖದ ಮೇರೆಗೆ ಈ ವಿಚಾರಣೆಯನ್ನು ಕೈಗೊಂಡಿದ್ದು, ಒಟ್ಟು 14 ಸಾಂವಿಧಾನಿಕ ಪ್ರಶ್ನೆಗಳ ಬಗ್ಗೆ ನ್ಯಾಯಾಲಯದ ಅಭಿಪ್ರಾಯವನ್ನು ಕೇಳಲಾಗಿತ್ತು. ಪೀಠವು 10 ದಿನಗಳ ಕಾಲ ವಿಚಾರಣೆ ನಡೆಸಿ ತನ್ನ ಅಭಿಪ್ರಾಯವನ್ನು ಪ್ರಕಟಿಸಿದೆ.

ಈ ಸಂವಿಧಾನ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಇದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande