
ವಿಜಯಪುರ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ಮೂರ್ಛೆರೋಗ (ಅಪಸ್ಮಾರ)ದ ಕಾಯಿಲೆ ಕುರಿತಾಗಿ ಇರುವ ಮೂಢನಂಬಿಕೆ ಹೋಗಲಾಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸರಿಯಾದ ತಿಳುವಳಿಕೆ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ್ ಗುಣಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪ ಕ್ರಮ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ ಅಪಸ್ಮಾರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಪಸ್ಮಾರ ಕಾಯಿಲೆಯ ಇರುವವರಿಗೆ ಗಾಯವಾಗದಂತೆ ನೋಡಿಕೊಳ್ಳವುದು ಮೊದಲ ಆದ್ಯತೆಯಾಗಿಗದೆ. ಮೂರ್ಛೆಯ ಸ್ಥಿತಿ ಹತ್ತು ನಿಮಿಷಕ್ಕೂ ಹೆಚ್ಚುಕಾಲ ಇದ್ದಲ್ಲಿ, ಪುನರಾವರ್ತಿತವಾಗುತ್ತಿದ್ದಲ್ಲಿ ವೈದ್ಯರ ಸಲಹೆ ಪಡೆಯಬೇಕು ಎಂದು ಅವರು ಹೇಳಿದರು.
ಮನೋರೋಗ ತಜ್ಞರಾದ ಡಾ. ಮಂಜುನಾಥ ಮಸಳಿ ಮಾತನಾಡಿ, ಅಪಸ್ಮಾರ (ಮೂರ್ಛೆರೋಗ) ಯಾವುದೇ ವಯಸ್ಸಿನವರಲ್ಲಿ ಸಂಭವಿಸಬಹುದಾದ ಮೆದುಳಿನ ಅಸ್ವಸ್ಥತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಅಪಸ್ಮಾರವು ಸಾಮಾನ್ಯ ನರಸಂಬ0ಧಿತ ಆರೋಗ್ಯ ಸಮಸ್ಯೆಯಾಗಿದೆ. ಸೂಕ್ತ ಚಿಕಿತ್ಸೆಯಿಂದ ಮೂರ್ಛೆರೋಗವನ್ನು ಗುಣಪಡಿಸಬಹುದಾಗಿದೆ ಎಂದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಅರ್ಚನಾ ಕುಲಕರ್ಣಿ ಅವರು ಮಾತನಾಡಿ ಅಪಸ್ಮಾರ ಆರೋಗ್ಯ ಬಗ್ಗೆ ಭಯ ಪಡಬೇಡಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ ಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಪರಶುರಾಮ ಹಿಟ್ನಳ್ಳಿ, ಜಾನ ಕಟವಟೆಡಿ, ಡಾ. ಓಂಕಾರ ತದ್ದೆವಾಡಿ,ಎನ್.ಆರ್.
ಬಾಗವಾನ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸಂಯೋಜಕ ಆನಂದ ರಾಠೋಡ, ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande