
ತುಮಕೂರು, 22 ನವೆಂಬರ್ (ಹಿ.ಸ.) :
ಆ್ಯಂಕರ್ : ತುಮಕೂರಿನ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪಾಲ್ಗೊಂಡರು. ಈ ವೇಳೆ ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ಪಿ.ಜೆ. ರೆಡ್ಡಿ ಮತ್ತು ಪಾವಗಡದ ಸ್ವಾಮಿ ಜಪಾನಂದ ಜೀ ಮಹಾರಾಜ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ವಿವಿಧ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಟ್ರಸ್ಟಿ ಕನ್ನಿಕಾ ಪರಮೇಶ್ವರಿ, ಕುಲಪತಿ ಡಾ. ಕೆ.ಬಿ. ಲಿಂಗೇಗೌಡ, ಕುಲಸಚಿವ ಅಶೋಕ್ ಮೆಹತಾ ಸೇರಿದಂತೆ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa