ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ
ಗದಗ, 25 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವಂಬರ್ 25, 2025 ರಂದು ಪ್ರಕಟಿಸಲಾಗಿದೆ. ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ 43,573 ಪುರುಷರು ಮತ್ತು 30,743 ಮಹಿಳೆಯರು ಸೇರಿ ಒಟ್ಟು 74,316 ಮತದಾರರಿದ್ದಾರೆ ಎಂದು ಪಶ್ಚಿಮ ಪದವೀಧರ
ಫೋಟೋ


ಗದಗ, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವಂಬರ್ 25, 2025 ರಂದು ಪ್ರಕಟಿಸಲಾಗಿದೆ. ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ 43,573 ಪುರುಷರು ಮತ್ತು 30,743 ಮಹಿಳೆಯರು ಸೇರಿ ಒಟ್ಟು 74,316 ಮತದಾರರಿದ್ದಾರೆ ಎಂದು ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕಟಿತ ಕರಡು ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಧಾರವಾಡ, ಜಿಲ್ಲಾಧಿಕಾರಿಗಳು ಗದಗ, ಜಿಲ್ಲಾಧಿಕಾರಿಗಳು ಹಾವೇರಿ ಮತ್ತು ಜಿಲ್ಲಾಧಿಕಾರಿಗಳು ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಅವರ ವ್ಯಾಪ್ತಿಯಲ್ಲಿ ಬರುವ ಎಲ್ಲ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಕಟಿತ ಕರಡು ಮತದಾರರ ಪಟ್ಟಿಯು ಬೆಂಗಳೂರು ಚುನಾವಣಾಧಿಕಾರಿ ಅವರ ವೆಬ್‍ಸೈಟ್ ನಲ್ಲಿ ಹಾಗೂ ಬೆಳಗಾವಿ ಪ್ರಾದೇಶಿಕ ಕಾರ್ಯಾಲಯದ ವೆಬ್‍ಸೈಟ್ ನಲ್ಲಿ ಲಭ್ಯವಿರುತ್ತದೆ.

ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಅರ್ಹ ಪಧವೀದರರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ನವೆಂಬರ್ 25, 2025 ರಿಂದ ಡಿಸೆಂಬರ್ 10, 2025 ರವರೆಗೆ ಸಲ್ಲಿಸಬಹುದು.

ಅರ್ಹ ಪ್ರತಿಯೊಬ್ಬ ವ್ಯಕ್ತಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಲು ಮತ್ತು ಕರಡು ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ, ಹೆಸರು ತೆಗೆದು ಹಾಕಲು ಹಾಗೂ ಕರಡು ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಳಿಗಾಗಿ ಮತದಾರರ ನೋಂದಣಿ ನಿಯಮಗಳು 1960 ರ ಪ್ರಕಾರ ಸೂಕ್ತವಾಗಿರುವ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ, ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಡು ಮತದಾರರ ಪಟ್ಟಿ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿ 43,573 ಪುರಷರು, 30,743 ಮಹಿಳೆಯರು ಸೇರಿದಂತೆ ಒಟ್ಟು 74,316 ಮತದಾರರು ಇದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande