
ಕಲಬುರಗಿ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರದಿಂದ ಕಲಬುರಗಿಗೆ ಪ್ರಯಾಣಿಸುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮತ್ತು ಕರ್ನಾಟಕ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ (ಕೆಎಸ್‌ಎಂಸಿಎಲ್) ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ್ ಬೀಳಗಿ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದಲ್ಲಿ ಬೀಳಗಿಯವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಕೂಡ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ವಿಜಯಪುರದಿಂದ ಕಲಬುರಗಿಯ ಕಡೆಗೆ ತೆರಳುತ್ತಿದ್ದ ಕಾರು ಜೇವರ್ಗಿ ಬೈಪಾಸ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ತಿರುಗಿಬಿದ್ದಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ. ಸ್ಥಳಕ್ಕೆ ಜೇವರ್ಗಿ ಪೊಲೀಸ್ ಸಿಬ್ಬಂದಿ ಧಾವಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾಂತೇಶ್ ಬೀಳಗಿ ಧಾರವಾಡ ಉಪ ವಿಭಾಗಾಧಿಕಾರಿ,ಕೆಐಡಿಬಿ ವ್ಯವಸ್ಥಾಪಕ ನಿರ್ದೇಶಕರಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ಸದ್ಯ ಕೆಎಸ್‌ಎಂಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆಯಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa