ಡಿಸೆಂಬರ 13 ರಂದು ರಾಷ್ಟ್ರೀಯ ಲೋಕ ಅದಾಲತ್
ಬಾಂಧವ್ಯ
ಫೋಟೋ


ಗದಗ, 26 ನವೆಂಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅದ್ಯಕ್ಷರಾದ ನಾಗವೇಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande