
ಬಳ್ಳಾರಿ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪಿಯುಸಿ ಹೊರತುಪಡಿಸಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ’ ಕಾರ್ಯಕ್ರಮಗಳ ಸೌಲಭ್ಯಕ್ಕಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನ.15 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಆನ್‌ಲೈನ್ ವೆಬ್‌ಸೈಟ್ https://ssp.postmatric.karnataka.gov.in/ ಗೆ ಭೇಟಿ ನೀಡಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.0850770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್