ನವೆಂಬರ್ 06 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ
ಹೊಸಪೇಟೆ, 03 ನವೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್.06 ರಂದು ಜಿಲ್ಲಾ ಕ್ರೀಡಾ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾಳುಗಳಿಂದ ನೊಂದಾಣಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸ
ನವೆಂಬರ್ 06 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ


ಹೊಸಪೇಟೆ, 03 ನವೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್.06 ರಂದು ಜಿಲ್ಲಾ ಕ್ರೀಡಾ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾಳುಗಳಿಂದ ನೊಂದಾಣಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾಲ್ಮೀಕಿ ಯುವಕ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಲಿಚ್ಛಿಸುವ ಸ್ಪರ್ದಾಳುಗಳು 15 ರಿಂದ 29 ವರ್ಷದೊಳಗಿರಬೇಕು. ಜಿಲ್ಲೆಯ ಎಲ್ಲಾ ಯುವಕ, ಯುವತಿಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬಹುದಾಗಿದೆ.

ಸಂಘಟಿಸುವ ಸ್ಪರ್ಧೆಗಳು : ಜಾನಪದ ನೃತ್ಯ(10 ಜನರ ತಂಡ), ಜಾನಪದ ಗೀತೆ (10 ಜನರ ತಂಡ), ಕಥೆ ಬರೆಯುವುದು(ವೈಯಕ್ತಿಕ), ಚಿತ್ರಕಲೆ (ವೈಯಕ್ತಿಕ) ವಿಷಯ ನಶಾ ಮುಕ್ತ ಯುವ ಅಥವಾ ಆರೋಗ್ಯಕರ ಜೀವನಶೈಲಿಗಾಗಿ ಯುವಜನರು, ಘೋಷಣೆ (ವೈಯಕ್ತಿಕ) ವಿಷಯ ತುರ್ತು ಪರಿಸ್ಥಿತಿಯ ಅವಧಿ ಮತ್ತು ಭಾರತದಲ್ಲಿ ಸಂವಿಧಾನದ ಉಲ್ಲಂಘನೆ ಮತ್ತು ಪ್ರಜಾಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವುದು, ಕವಿತೆ ಬರೆಯುವುದು(ವೈಯಕ್ತಿಕ), ವಿಜ್ಞಾನ ಮೇಳದ ಪ್ರದರ್ಶನ (5 ಜನರ ತಂಡ) ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿಗೆ ಭೇಟಿ ನೀಡಿ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ಆಧಾರ್ ಕಾರ್ಡ್ ಮತ್ತು ಜನನ ಪ್ರಮಾಣ ಪತ್ರದೊಂದಿಗೆ ಹೆಸರು ನೊಂದಾಣಿ ಮಾಡಬಹುದು ಅಥವಾ ನ.06 ರಂದು ಬೆ.09 ಗಂಟೆಯಿಂದ 10:30 ರೊಳಗೆ ಜಿಲ್ಲಾ ಕ್ರೀಡಾ ಸಂಕೀರ್ಣದಲ್ಲಿ ನೊಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾ ಕ್ರೀಡಾಂಗಣ ಅಥವಾ ಮೊ.9164700036, 9483480101 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande