
ಗದಗ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಸಾಲ, ಸಹಾಯಧನ ಯೋಜನೆಗಳಲ್ಲಿ ಸೌಲಭ್ಯ ಒದಗಿಸಲು ನಿಗಮದ ಅಂತರ್ಜಾಲ ಅರಿವು ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಬಡ್ಡಿ ರಹಿತ ಸಾಲ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ನೇರ ಸಾಲ ಯೋಜನೆ, ಕ್ರೈಸ್ತ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
2025-26 ನೇ ಸಾಲಿನ ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗಮದ ಅಂತರ್ಜಾಲ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ನವೆಂಬರ್ 30 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕ್ರಿಶ್ಚಿಯಮ್ ಸಮುದಾಯ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ ಅಲ್ಪಸಂಖ್ಯಾತರ ಭವನ, 1 ನೇ ಮಹಡಿ ಜಿಲ್ಲಾ ನ್ಯಾಯಾಲಯ ಎದುರುಗಡೆ, ಹುಬ್ಬಳ್ಳಿ ರಸ್ತೆ,ಗ ದಗ ಇಲ್ಲಿ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP