ನ.08 ರಂದು ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ
ಬಳ್ಳಾರಿ, 03 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನ.08 ರಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲ
The Jayanti of the great devotee Sri Kanakadasa on November 8th


The Jayanti of the great devotee Sri Kanakadasa on November 8th


ಬಳ್ಳಾರಿ, 03 ನವೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನ.08 ರಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಕನಕ ವೃತ್ತದಲ್ಲಿರುವ ಭಕ್ತ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಬಳಿಕ ಬೆಳಿಗ್ಗೆ 10 ಗಂಟೆಗೆ ಭವ್ಯ ಮೆರವಣಿಗೆ ನಡೆಯಲಿದೆ.

ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷ್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಡಾ.ಪಿ.ಎಲ್.ಗಾದಿಲಿಂಗನಗೌಡ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ವೀರಶೈವ ಪದವಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ನೀಲಮ್ಮ ಕೆ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು.

ಬಳ್ಳಾರಿಯ ಕವಿತಾ ಗಂಗೂರು ಅವರಿಂದ ದಾಸರ ಪದಗಳ ಸಂಗೀತ ಕಾರ್ಯಕ್ರಮ ಇರಲಿದೆ.

ಮೆರವಣಿಗೆ : ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಅಂಗವಾಗಿ ಮೆರವಣಿಗೆ ನಡೆಯಲಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆ- ಬ್ರೂಸ್‍ಪೇಟೆ ಹಳೆ ಪೆÇಲೀಸ್ ಠಾಣೆ- ತೇರುಬೀದಿ- ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆಯ ವರೆಗೆ ನಡೆಯಲಿದೆ.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಪಿ.ಎಸ್., ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande