
ವಿಜಯಪುರ, 04 ನವೆಂಬರ್ (ಹಿ.ಸ.) :
ಆ್ಯಂಕರ್ : ನಾನು ಸಚಿವ ಸ್ಥಾನ ಆಕಾಂಕ್ಷಿ ಎಂದು ನಾಗಠಾಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಎಲ್ಲರೂ ಆಕಾಂಕ್ಷೆಗಳಾಗಿದ್ದಾರೆ. ನಾನು ಯಾರು ಪರವಾಗಿಯೂ ಇಲ್ಲ. ಯಾರ ವಿರುದ್ಧವೂ ಇಲ್ಲ. ಆದ್ರೇ, ಕಾಂಗ್ರೆಸ್ ಹೈಕಮಾಂಡ್ ಶಾಸಕರ ಎಲ್ಲ ಮಾಹಿತಿ ಸಂಗ್ರಹಿಸಿದ್ದಾರೆ. ಅದರ ಆಧಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಅದಕ್ಕಾಗಿ ನಾನು ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದೇನೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande