
ಬಿಲಾಸ್ಪುರ, 04 ನವೆಂಬರ್ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲ್ವೆ ಅಪಘಾತದಲ್ಲಿ ಕನಿಷ್ಠ ಆರು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಲಾಲ್ ಖಂಡ್ ನಿಲ್ದಾಣದ ಬಳಿ ಸರಕು ರೈಲು ಪ್ರಯಾಣಿಕ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಲವು ಬೋಗಿಗಳು ಹಳಿತಪ್ಪಿವೆ.
ರೈಲ್ವೆ ಮೂಲಗಳ ಪ್ರಕಾರ, ಮೃತರ ಸಂಖ್ಯೆ ಆರು ಎಂದು ಪ್ರಾಥಮಿಕ ವರದಿಗಳು ಹೇಳುತ್ತಿದ್ದರೂ, ಇದನ್ನು ಅಧಿಕೃತವಾಗಿ ಇನ್ನೂ ದೃಢಪಡಿಸಲಾಗಿಲ್ಲ. ಸುಮಾರು 12 ಜನ ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಅಪಘಾತ ಬಿಲಾಸ್ಪುರ ನಿಲ್ದಾಣದಿಂದ ಸುಮಾರು 5 ಕಿಲೋಮೀಟರ್ ದೂರದಲ್ಲಿರುವ ಗಟೋರಾ ಮತ್ತು ಬಿಲಾಸ್ಪುರ ನಿಲ್ದಾಣಗಳ ನಡುವೆ ಸಂಭವಿಸಿದ್ದು, ಅಪಘಾತದ ಬಳಿಕ ತುರ್ತು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ರೈಲ್ವೆ ಮತ್ತು ಜಿಲ್ಲಾ ಆಡಳಿತದ ತಂಡಗಳು ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಸರಕು ರೈಲು ಸಿಗ್ನಲ್ ತಪ್ಪಿದ ಪರಿಣಾಮ ಪ್ರಯಾಣಿಕ ರೈಲಿಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa