ಕರಾಟೆ-ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ತರಬೇತುದಾರರಿಂದ ಅರ್ಜಿ ಆಹ್ವಾನ
ಬಳ್ಳಾರಿ, 04 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರಸ್ತಕ ಸಾಲಿಗೆ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 6, 7, 8, 9 ಮತ್ತು 11 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಕರಾಟೆ - ಸ್ವಯಂ ರಕ್ಷಣಾ ಕ
ಕರಾಟೆ-ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ತರಬೇತುದಾರರಿಂದ ಅರ್ಜಿ ಆಹ್ವಾನ


ಬಳ್ಳಾರಿ, 04 ನವೆಂಬರ್ (ಹಿ.ಸ.) :

ಆ್ಯಂಕರ್ : ಪ್ರಸ್ತಕ ಸಾಲಿಗೆ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 6, 7, 8, 9 ಮತ್ತು 11 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಕರಾಟೆ - ಸ್ವಯಂ ರಕ್ಷಣಾ ಕೌಶಲ್ಯ ತರಬೇತಿಯನ್ನು ವಾರದಲ್ಲಿ ಎರಡು ದಿನಗಳಂತೆ 6 ತಿಂಗಳ ತರಬೇತಿ ನೀಡುವ ನಿಟ್ಟಿನಲ್ಲಿ ಅರ್ಹ ಮಹಿಳಾ ಮತ್ತು ಪುರುಷ (ಮಹಿಳೆಯರಿಗೆ ಮೊದಲ ಆದ್ಯತೆ) ತರಬೇತುದಾgರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ನೀಡುವ ತರಬೇತುದಾರರಿಗೆ ಸಂಭಾವನೆ ರೂ.750 ಮತ್ತು ಪ್ರಯಾಣ ವೆಚ್ಚ ರೂ.100 ರಂತೆ ನೀಡಲಾಗುತ್ತಿದ್ದು, ಆಸಕ್ತ ಕರಾಟೆ-ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ಪಡೆದ ಮಹಿಳೆ ಮತ್ತು ಪುರುಷ ತರಬೇತುದಾರರು ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ ಮತ್ತು ವಿವರಗಳಿಗಾಗಿ ಆನ್ ಲೈನ್ ವೆಬ್ ಸೈಟ್ http://dom.karnataka.gov.in ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಹಾಗೂ ಜಿಲ್ಲೆಯ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ (ಬಳ್ಳಾರಿ-8310321101, ಸಂಡೂರು-9036925966/ 8660575061 ಮತ್ತು ಸಿರುಗುಪ್ಪ-9148889975) ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande