
ಬಳ್ಳಾರಿ, 04 ನವೆಂಬರ್ (ಹಿ.ಸ.) :
ಆ್ಯಂಕರ್ : ತುಂಗಭದ್ರ ಜಲಾಶಯದಿಂದ ಎರಡನೇ ಬೆಳೆಗೆ ನೀರು ನೀಡುವ ಕುರಿತು ಏರ್ಪಡಿಸಲಾಗಿದ್ದ ತುಂಗಭದ್ರ ನೀರಾವರಿ ಸಲಹಾ ಸಮಿತಿಯ 125ನೇ ಸಭೆಯನ್ನು ಮಾಜಿ ಸಚಿವ, ಶಾಸಕ ಎಚ್.ವೈ. ಮೇಟಿ ಅವರ ನಿಧನದ ಹಿನ್ನಲೆಯಲ್ಲಿ ನವೆಂಬರ್ 5ರ ಬುಧವಾರ ನಿಗಧಿಯಾಗಿದ್ದ ಸಭೆಯನ್ನು ಮುಂದೂಡಲಾಗಿದೆ.
ಈ ಕುರಿತು ಕರ್ನಾಟಕ ನೀರಾವರಿ ನಿಗಮದ ತುಂಗಭದ್ರ ಜಲಾಶಯದ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ನೀಡಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬುಧವಾರ ಮಧ್ಯಾಹ್ನ ಏರ್ಪಟ್ಟಿದ್ದ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ಸಭೆಯ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್