ಚಿತ್ತಾಪುರ ಆರ್‌ಎಸ್‌ಎಸ್‌ ಪಥ ಸಂಚಲನ ವಿವಾದ; ಬೆಂಗಳೂರಿನಲ್ಲಿಂದು ೨ನೇ ಹಂತದ ಶಾಂತಿ ಸಭೆ
ಬೆಂಗಳೂರು, 05 ನವೆಂಬರ್ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್ ಪಥ ಸಂಚಲನ ಹಾಗೂ ಭೀಮ್ ಆರ್ಮಿ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಕಲಬುರಗಿ ಹೈಕೋರ್ಟ್ ನಿರ್ದೇಶನದಂತೆ ಇಂದು ಸಂಜೆ ಬೆಂಗಳೂರಿನಲ್ಲಿ 2ನೇ ಹಂತದ ಶಾಂತಿ ಸಭೆ ನಡೆಯಲಿದೆ. ಈ ಸಭ
Meeting


ಬೆಂಗಳೂರು, 05 ನವೆಂಬರ್ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್ ಪಥ ಸಂಚಲನ ಹಾಗೂ ಭೀಮ್ ಆರ್ಮಿ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಕಲಬುರಗಿ ಹೈಕೋರ್ಟ್ ನಿರ್ದೇಶನದಂತೆ ಇಂದು ಸಂಜೆ ಬೆಂಗಳೂರಿನಲ್ಲಿ 2ನೇ ಹಂತದ ಶಾಂತಿ ಸಭೆ ನಡೆಯಲಿದೆ. ಈ ಸಭೆ ಪಥಸಂಚಲನಕ್ಕೆ ಅನುಮತಿ ನೀಡುವ ಅಥವಾ ನೀಡದಿರಲು ಸಂಬಂಧಿಸಿದಂತೆ ನಿರ್ಣಾಯಕವಾಗಿರುವುದರಿಂದ ವಿಶೇಷ ಮಹತ್ವ ಪಡೆದಿದೆ.

ಹೈಕೋರ್ಟ್ ಆದೇಶದಂತೆ ರಾಜ್ಯದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ಚಿತ್ತಾಪುರ ಘಟನೆಯ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಪರವಾಗಿ ಅರ್ಜಿ ಸಲ್ಲಿಸಿದ್ದ ಅಶೋಕ ಪಾಟೀಲ್ ಸೇರಿದಂತೆ ಐವರು ಮಾತ್ರ ಸಭೆಯಲ್ಲಿ ಭಾಗವಹಿಸಲು ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಗಿದೆ.

ಆರ್‌ಎಸ್‌ಎಸ್‌ ಪರ ಅರ್ಜಿದಾರ ಅಶೋಕ ಪಾಟೀಲ್, ಕೃಷ್ಣಾ ಜೋಶಿ, ಪ್ರಹ್ಲಾದ್ ವಿಶ್ವಕರ್ಮ, ಆರ್‌ಎಸ್‌ಎಸ್ ಪರ ವಕೀಲರು ಅರುಣ್ ಶ್ಯಾಮ್ ಮತ್ತು ವಾದಿರಾಜ್ ಕಾಡ್ಲೂರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಶಾಂತಿ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಹಾಗೂ ಇತರ ಸಂಘಟನೆಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸದ ಕಾರಣಕ್ಕೆ ಭೀಮ್ ಆರ್ಮಿ ಸೇರಿದಂತೆ ಇತರ 9 ಸಂಘಟನೆಗಳಿಗೆ ಆಹ್ವಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಆರ್‌ಎಸ್‌ಎಸ್ ಪರ ಮುಖಂಡರ ಮತ್ತು ವಕೀಲರ ಲಿಖಿತ ಹೇಳಿಕೆಗಳನ್ನು ಎಜಿ ಹಾಗೂ ಜಿಲ್ಲಾಡಳಿತ ಪಡೆದುಕೊಳ್ಳಲಿದೆ. ಈ ಶಾಂತಿ ಸಭೆಯ ವರದಿ ಆಧರಿಸಿ ನವೆಂಬರ್ 7 ರಂದು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು, ಪಥ ಸಂಚಲನಕ್ಕೆ ಅನುಮತಿ ನೀಡುವ ಕುರಿತು ನಿರ್ಧಾರವಾಗಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande