
ಹಾಸನ, 06 ನವೆಂಬರ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಉಪ ನಿರ್ದೇಶಕರ ಕಚೇರಿ, ಹಾಸನ ಜಿಲ್ಲಾ ಬಾಲಭವನ ಯೋಜನೆಯಡಿ 9 ರಿಂದ 16 ವರ್ಷದೊಳಗಿನ ಮಕ್ಕಳಿಗೆ ನ.12 ರಂದು ಬೆ.10 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ 2025-26ನೇ ಸಾಲಿನ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಸಂಬಂಧ ಸೃಜನಾತ್ಮಕ ಕಲೆ (ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ), ಸೃಜನಾತ್ಮಕ ಬರವಣಿಗೆ (ಕಥೆ, ಕವನ, ಪ್ರಬಂಧ ಬರೆಯುವುದು), ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ (ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ ಮತ್ತು ವಿವರಣೆ) ಆಸಕ್ತಿಯುಳ್ಳ ಮಕ್ಕಳು ಒಂದು ಮಗು ಒಂದೇ ಸ್ಪರ್ಧೆಯಲ್ಲಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ.
ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಕೆ.ಆರ್ ಪುರಂ. 9ನೇ ಕ್ರಾಸ್, ಹಾಸನ ಇಲ್ಲಿ ನ.10 ರಂದು ಸಂಜೆ 5.30 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಹಾಗೂ ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಮಕ್ಕಳನ್ನು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ನಿಗದಿಪಡಿಸಿದ ದಿನಾಂಕದಂದು ಕರೆದುಕೊಂಡು ಹೋಗಲು ಅವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗೆ ಕಚೇರಿ ದೂರವಾಣಿ ಸಂಖ್ಯೆ 08172-267218, ಬಾಲಭವನ ಕಾರ್ಯಕ್ರಮ ಸಂಯೋಜಕರು 8197132944 ಹಾಗೂ ಕಚೇರಿ ಸಹಾಯಕರು 8495839556 ರನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa