ತಂತ್ರಜ್ಞಾನ ಕ್ರಾಂತಿಗೆ ಖಾಸಗಿ ವಲಯದ ಪಾತ್ರ ಅವಶ್ಯಕ : ಡಾ. ಜಿತೇಂದ್ರ ಸಿಂಗ್
ನವದೆಹಲಿ, 06 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತದ ಆಳವಾದ ತಂತ್ರಜ್ಞಾನ ಕ್ರಾಂತಿಯನ್ನು ವೇಗಗೊಳಿಸಲು ಕೈಗಾರಿಕೆ ಮತ್ತು ಖಾಸಗಿ ಹೂಡಿಕೆದಾರರ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವೆಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದರು. ಸರ್ಕಾರವು ಸಂಶೋಧನೆ ಮತ್ತು ನಾವೀ
Deeptech


ನವದೆಹಲಿ, 06 ನವೆಂಬರ್ (ಹಿ.ಸ.) :

ಆ್ಯಂಕರ್ : ಭಾರತದ ಆಳವಾದ ತಂತ್ರಜ್ಞಾನ ಕ್ರಾಂತಿಯನ್ನು ವೇಗಗೊಳಿಸಲು ಕೈಗಾರಿಕೆ ಮತ್ತು ಖಾಸಗಿ ಹೂಡಿಕೆದಾರರ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವೆಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದರು.

ಸರ್ಕಾರವು ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಪ್ರಯೋಗಾಲಯಗಳೊಳಗೆ ಸೀಮಿತಗೊಳಿಸುವುದಿಲ್ಲ, ಬದಲಿಗೆ ಅವುಗಳನ್ನು ಮಾರುಕಟ್ಟೆ ಆಧಾರಿತ ಪರಿಹಾರಗಳಾಗಿ ಪರಿವರ್ತಿಸಲು ಉದ್ದೇಶಿಸಿದೆ ಎಂದು ಅವರು ವಿವರಿಸಿದರು.

ನವದೆಹಲಿಯಲ್ಲಿ ಗುರುವಾರ ನಡೆದ ಉದಯೋನ್ಮುಖ ವಿಜ್ಞಾನ ಮತ್ತು ತಂತ್ರಜ್ಞಾನ ನಾವೀನ್ಯತೆ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಪ್ರಾರಂಭಿಸಲಾದ ₹1 ಲಕ್ಷ ಕೋಟಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ಯೋಜನೆ PitchXSTIC ಖಾಸಗಿ ವಲಯವನ್ನು ಸಂಶೋಧನೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪ್ರೇರೇಪಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದೇಶದಾದ್ಯಂತದ 20 ಕ್ಕೂ ಹೆಚ್ಚು ನವೋದ್ಯಮಗಳು ತಮ್ಮ ನಾವೀನ್ಯತೆಗಳನ್ನು ಪ್ರದರ್ಶಿಸಿವೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಪ್ರೊ. ಅಭಯ್ ಕರಂಡಿಕರ್ ಅವರು, ಇಲಾಖೆ ಮತ್ತು ತಂತ್ರಜ್ಞಾನ ಅಭಿವೃದ್ಧಿ ಮಂಡಳಿ ಶೀಘ್ರದಲ್ಲೇ ಉದಯೋನ್ಮುಖ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನವೋದ್ಯಮಗಳಲ್ಲಿ ಹೂಡಿಕೆ ಪ್ರಾರಂಭಿಸಲಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವಾಲಯಗಳು ಹಾಗೂ ಸರ್ಕಾರಿ ಇಲಾಖೆಗಳ ನಾಮನಿರ್ದೇಶನದ ಮೇರೆಗೆ ಆಯ್ಕೆಯಾದ 30 ಸ್ಟಾರ್ಟ್‌ಅಪ್‌ಗಳು ತಮ್ಮ ನಾವೀನ್ಯತೆಗಳನ್ನು ಪ್ರದರ್ಶಿಸಿದವು.

ಇವುಗಳಲ್ಲಿ ಬಾಹ್ಯಾಕಾಶ ಮತ್ತು ರಕ್ಷಣಾ ತಂತ್ರಜ್ಞಾನ, ಕ್ವಾಂಟಮ್ ತಂತ್ರಜ್ಞಾನ, ಸೈಬರ್ ಭದ್ರತೆ, ಆರೋಗ್ಯ ರಕ್ಷಣೆ, ಅರೆವಾಹಕಗಳು, ಕೃತಕ ಬುದ್ಧಿಮತ್ತೆ ಮತ್ತು ಕೃಷಿ ತಂತ್ರಜ್ಞಾನದಂತಹ ಪ್ರಮುಖ ವಲಯಗಳು ಸೇರಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande