
ವಿಜಯಪುರ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ತಂತ್ರಜ್ಞಾನದ ಇಂದಿನ ಯುಗದಲ್ಲಿ ಡಿಜಿಟಲ್ ಅಪರಾಧಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಅಂತರ್ಜಾಲದ ಬಳಕೆಯನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಹೇಳಿದರು.
ನಗರದ ಬಿಎಲ್‌ಡಿಇ ಸ್ವಾಯತ್ತ ವಿಶ್ವವಿದ್ಯಾಲಯ ಕಾನೂನು ಶಾಲೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಶುಕ್ರವಾರ ಬಿಎಲ್‌ಡಿಇ ಸ್ವಾಯತ್ತ ವಿಶ್ವವಿದ್ಯಾಲಯದ ಕೇಂದ್ರಿಯ ಗ್ರಂಥಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಸೈಬರ್ ಕಾನೂನು ಮತ್ತು ಸೈಬರ್ ಅಪರಾಧಗಳ ಕುರಿತು ರಾಷ್ಟç ಮಟ್ಟದ ಸಮ್ಮೇಳನ-2025ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸೈಬರ್ ಅಪರಾಧಗಳು ಇಂದಿನ ಕಾಲದಲ್ಲಿ ಒಂದು ಸವಾಲಾಗಿದೆ. ಸೈಬರ್ ಅಪರಾಧಗಳು ಯಾವುದೇ ಗಡಿಯನ್ನು ಹೊಂದಿಲ್ಲ ಹಲವಾರು ಅನಕ್ಷರಸ್ಥರು ಹಾಗೂ ಅಕ್ಷರಸ್ಥರು ಸಹ ಈ ಒಂದು ಸೈಬರ್ ಅಪರಾಧ ಹಾಗೂ ವಂಚನೆಗೆ ಬಲಿಯಾಗಿರುವ ಅನೇಕ ಪ್ರಕರಣಗಳನ್ನು ಕಾಣಬಹುದಾಗಿದೆ.
ಇಂಟರ್ನೆಟ್ ಹೊಂದಿರುವ ಸ್ಮಾರ್ಟ್ಫೋನ್ ಬಳಕೆ ಹೆಚ್ಚಾಗಿರುವ ಪರಿಣಾಮ ನಾಕ್ರೋಟಿಕ್ ಡ್ರಗ್ಸ್, ಡಾರ್ಕ್ವೆಬ್, ಮಾನವ ಕಳ್ಳಸಾಗಾಣಿಕೆಗಳಂತಹ ಅಪರಾಧ ಹಾಗೂ ವಂಚನೆವೆಸಗಲು ಅಪರಾಧಿಗಳಿಗೆ ಆನ್‌ಲೈನ್ ನಲ್ಲಿ ಅನೇಕ ಸಾಧನಗಳು ಲಭ್ಯವಿವೆ. ಸೈಬರ್ ಅಪರಾಧಗಳನ್ನು ಅಲ್ಲಗಳೆಯದೇ ಅವುಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿ ವಂಚಿತರಿ0ದ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಸೈಬರ್ ಅಪರಾಧಗಳು ಜರುಗಿದಲ್ಲಿ ಪ್ರಕರಣ ದಾಖಲಿಸಿ ತ್ವರಿತವಾಗಿ ಪ್ರಕರಣವನ್ನು ಇತ್ಯರ್ಥಪಡಿಸಲು ಸುಮಾರು 100 ನುರಿತ ತರಬೇತಿ ಪಡೆದ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಪೊಲೀಸ್ ಇಲಾಖೆ ಮೂಲಕ ಜಿಲ್ಲಾದ್ಯಂತ ಸೈಬರ್ ಅಪರಾಧ ಹಾಗೂ ಅವುಗಳ ಪ್ರಕಾರಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ನೀಡಲಾಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಪ್ರತಿವಾರ ಸೈಬರ ಅಪರಾಧಗಳ ಕುರಿತು ಜಾಗೃತಿ ಅಭಿಯಾನವನ್ನು ಕೈಗೊಳ್ಳುವುದರಿಂದ ಇದರಿಂದ ವಿದ್ಯಾರ್ಥಿಗಳು ಜಾಗೃತಿ ಸೈಬರ್ ವಂಚನೆ ತಡೆಗಟ್ಟುವಲ್ಲಿ ಅವರು ನೆರೆಹೊರೆಯವರಿಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಜನರನ್ನು ಜಾಗೃತರಾಗಿರಲು ಇದು ಸಹಕಾರಿಯಾಗಿದೆ. ಸೈಬರ್ ಅಪರಾಧಕ್ಕೆ ಅಥವಾ ವಂಚನೆಗೆ ಬಲಿಯಾದರೆ ಧೈರ್ಯವಾಗಿ 1930 ಉಚಿತ ಸಹಾಯವಾಣಿಗೆ ಕರೆಮಾಡಿ ಮಾಹಿತಿ ನೀಡಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಳಿಸುವಂತೆ ಅವರು ಈ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಕರೆ ನೀಡಿದರು.
ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾಲಯದ ಸಮ ಕುಲಾಧಿಪತಿಗಳಾದ ವೈ.ಎಮ್. ಜಯರಾಜ ಮಾತನಾಡಿ, ಮನುಷ್ಯನ ಬೆಳವಣಿಗೆ ಹಾಗೂ ವಿಕಾಸವಾದಂತೆ ತಂತ್ರಜ್ಞಾನವು ಕೂಡಾ ಬೆಳೆದು ಸೈಬರ್ ಅಪರಾಧಗಳು ಹೆಚ್ಚಾಗಿವೆ ಕಂಡು ಬರುತ್ತಿವೆ ಎಂದು ಹೇಳಿದರು.
ಆಧುನಿಕ ಜಗತ್ತಿನಲ್ಲಿ ಸ್ಮಾರ್ಟ್ಫೋನ್ ಬಳಕೆ ವ್ಯಾಪಕವಾಗಿರುವುದರಿಂದ ಸರ್ವ ರಂಗದಲ್ಲಿಯೂ ಅಂತರ್ಜಾಲದ ಹಾವಳಿ ಹೆಚ್ಚಾಗುತ್ತಿದೆ.ವೈದ್ಯಕೀಯ, ವ್ಯಾಪಾರ ಹೀಗೆ ಅನೇಕ ಕಡೆ ಜನರು ಅಂತರ್ಜಾಲದ ಬಳಕೆದಾರರು ಹೆಚ್ಚಾಗಿದ್ದಾರೆ. ವಂಚಕರು ಮೊಬೈಲ್ ಅಪ್ಲಿಕೇಶನ್ ಮೂಲಕ ಸಾಲ ಸೌಲಭ್ಯ ನೀಡುವ ಆಸೆ ಹುಟ್ಟಿಸಿ ವಂಚಿಸುವ ಪ್ರಕರಣಗಳು, ಅಂತರ್ಜಾಲದ ಮೂಲಕ ಹೂಡಿಕೆಯ ನೆಪದಲ್ಲಿ ಹಣ ಪಡೆದು ವಂಚಿಸುವ ಪ್ರಕರಣಗಳು, ಡಿಜಿಟಲ್ ಅರೆಸ್ಟ್ ಸಂಬA0ಧಿತ ವಂಚನೆಗಳು, ಸಿಮ್ ಸ್ವಾಪಿಂಗ್ ಪ್ರಕರಣಗಳು, ಹ್ಯಾಕಿಂಗ್ ಪ್ರಕರಣಗಳು ಸೈಬರ್ ಅಪರಾಧಕ್ಕೆ ಉದಾಹರಣೆಯಾಗಿವೆ ಎಂದು ಹೇಳಿದರು.
ನಮ್ಮ ಹಿರಿಯರು ಸಾಮಾಜಿಕ ಕ್ರಾಂತಿ, ಕೈಗಾರಿಕಾ ಕ್ರಾಂತಿಗಳನ್ನು ಎದುರಿಸಿದರು ಪ್ರಸ್ತುತ ದಿನಗಳಲ್ಲಿ ನಾವು ಡಿಜಿಟಲ್ ಕ್ರಾಂತಿ ಹಾಗೂ ಸೈಬರ್ ವಂಚನೆಗಳನ್ನು ಎದುರಿಸುತ್ತಿದ್ದೇವೆ. ಸೈಬರ್ ಅಪರಾಧಗಳಿಗೆ ಅಂಜದೇ ಅವುಗಳಿಂದ ಜಾಗೃತರಾಗಿದ್ದು, ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಡಾ. ಸುನೀಲ್ ಬಗಾಡೆ, ಹೊಳೆನರಸೀಪುರದ ಸರಕಾರಿ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ.ಎಮ್.ಕೆ ಮಾಟೋಳ್ಳಿ, ಬೆಂಗಳೂರಿನ ಸೈಬರ್ ಕ್ರೆöÊಂ ವಿಭಾಗ ಸಿ.ಐ.ಡಿ ಡಿ.ವೈ.ಎಸ್.ಪಿ, ಯಶವಂತ್ ಕುಮಾರ, ಮಂಗಳೂರಿನ ಸಹ್ಯಾದ್ರಿ ತಾಂತ್ರಿಕ ಮತ್ತು ಆಡಳಿತ ಮಹಾವಿದ್ಯಾಲಯದ ಕಂಪ್ಯೂಟರ್ ಇಂಜಿನಿಯರ್ ವಿಭಾಗದ ಪ್ರಾಧ್ಯಾಪಕರಾದ ಡಾ. ಅನಂತಪ್ರಭು, ಬಿ.ಎಲ್.ಡಿ.ಇ ಕಾನೂನು ಶಾಲೆಯ ಡೀನ್ ಹಾಗೂ ಪ್ರಾಂಶುಪಾಲರಾದ ಡಾ. ರಘುವೀರ ಕುಲಕರ್ಣಿ, ಬಿ.ಎಲ್.ಡಿ.ಇ ಕಾನೂನು ಶಾಲೆಯ ಸಹಾಯಕ ಪ್ರಾಧ್ಯಾಪಕರು ಕೆ.ಶೇಷಾದ್ರಿ ಜಿಲ್ಲೆಯ ಪೋಲಿಸ್ ಅಧಿಕಾರಿ ಸಿಬ್ಬಂದಿಗಳು, ಕಾನೂನು ವಿದ್ಯಾಲಯಗಳ ಕಾನೂನು ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ವಕೀಲರು, ವೈದ್ಯರು ಹಾಗೂ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande