ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 8, 9ರಂದು ಪ್ರವೇಶ ಪರೀಕ್ಷೆ
ರಾಯಚೂರು, 07 ನವೆಂಬರ್ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಯುಪಿಎಸ್ ಗೆಜೆಟೆಡ್ ನಾಗರೀಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್ ಮತ್ತು ಗ್ರೂಪ್-ಸಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ನವೆಂಬರ್ 8 ಹಾಗೂ 9ರಂದು ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 8, 9ರಂದು ಪ್ರವೇಶ ಪರೀಕ್ಷೆ


ರಾಯಚೂರು, 07 ನವೆಂಬರ್ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಯುಪಿಎಸ್ ಗೆಜೆಟೆಡ್ ನಾಗರೀಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್ ಮತ್ತು ಗ್ರೂಪ್-ಸಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ನವೆಂಬರ್ 8 ಹಾಗೂ 9ರಂದು ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹಾಜರಾಗುವಂತೆ ಕೋರಲಾಗಿದೆ.

ನಗರದ ಬೋಳಮಾನದೊಡ್ಡಿ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆಯಲ್ಲಿ ನವೆಂಬರ್ 8ರ ಬೆಳಿಗ್ಗೆ 10:30 ರಿಂದ 12:30 ಘಂಟೆಯವರೆಗೆ ಗ್ರೂಪ್-ಸಿ ಪರೀಕ್ಷಾ ಪೂರ್ವತರಬೇತಿಗೆ ಪ್ರವೇಶ ಪರೀಕ್ಷೆ ಹಾಗೂ ನವೆಂಬರ್ 9ರ ಬೆಳಿಗ್ಗೆ 10:30 ರಿಂದ 12:30 ಯುಪಿಎಸ್ ಗೆಜೆಟೆಡ್ ನಾಗರೀಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್ ನಡೆಸಲಾಗುವುದು.

ನಂತರ 2:00 ಘಂಟೆಯಿಂದ 3;30 ವರೆಗೆ 2ನೇ ಪೇಪರ್ ನಡೆಸಲಾಗುತ್ತಿದ್ದು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ವಿಳಾಸ: https://sevasindhu.karnataka.gov.in/Minority_HallTicket_App/Hall_Ticket.aspx ಲಿಂಕ್‌ನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಪಡೆದು ಪ್ರವೇಶ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande